ಬಸ್ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಬೆಳೆಸುತ್ತಿದ್ದರು. ಬಸ್ ಗಂಗಾನಾಳ ಬಳಿ ಬರುತ್ತಿದ್ದಂತೆ ಏಕಾಏಕಿ ಮುಂಭಾಗದ ಚಕ್ರದ ಪಟ್ಟಿಯ ನಟ್ ಕಿತ್ತಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬಿಟ್ಟು ಪಕ್ಕದ ಹೊಲಕ್ಕೆ ನುಗ್ಗಿದೆ. ಬಸ್ ವೇಗ ಕಡಿಮೆ ಇದ್ದಿದ್ದರಿಂದ ದೊಡ್ಡ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಇದನ್ನೂ ಓದಿ: ಕಬ್ಬು ಬೆಂಬಲ ಬೆಲೆ ನೀಡುವಲ್ಲಿ ತಾರತಮ್ಯ – ಸಿಡಿದೆದ್ದ ವಿಜಯಪುರ ಜಿಲ್ಲೆಯ ರೈತರು
ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಸ್ಥಳಕ್ಕೆ ಧಾವಿಸಿ, ಪ್ರಯಾಣಿಕರನ್ನು ಬಸ್ನಿಂದ ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ.
ಬಸ್ ಚಾಲಕನ ಸಮಯಪ್ರಜ್ಞೆಯಿಂದಲೇ ದೊಡ್ಡ ದುರಂತ ತಪ್ಪಿದೆ ಎಂದು ಪ್ರಯಾಣಿಕರು ಹೇಳಿದ್ದಾರೆ.ಇದನ್ನೂ ಓದಿ: 2 ವರ್ಷದ ಬಳಿಕ ಆರ್ಬಿಐ ನಿಗದಿತ ಗರಿಷ್ಠ ಮಿತಿ ದಾಟಿದ ಹಣದುಬ್ಬರ; ಈರುಳ್ಳಿ, ಬೆಳ್ಳುಳ್ಳಿ ದರ ಗಗನಕ್ಕೆ
