ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ಬಾರಾಮುಲ್ಲಾ (Baramulla) ಜಿಲ್ಲೆಯಲ್ಲಿ ಎರಡು ಹ್ಯಾಂಡ್ ಗ್ರೆನೇಡ್ಗಳೊಂದಿಗೆ (Hand Grenades) ವ್ಯಕ್ತಿಯೊಬ್ಬನನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ತಂಗ್ಮಾರ್ಗ್ನ ಬದರ್ಕೋಟ್ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿವೆ. ಬಂಧಿತನನ್ನು ಗುಲಾಂ ಜೀಲಾನಿ ರೇಶಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕಬ್ಬು ಬೆಂಬಲ ಬೆಲೆ ನೀಡುವಲ್ಲಿ ತಾರತಮ್ಯ – ಸಿಡಿದೆದ್ದ ವಿಜಯಪುರ ಜಿಲ್ಲೆಯ ರೈತರು
ಬಂಧಿತನ ಬಳಿಯಿಂದ ಒಂದು ಹ್ಯಾಂಡ್ ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ. ಬಳಿಕ ಆತನ ವಿಚಾರಣೆ ವೇಳೆ ನೀಡಿದ ಮಾಹಿತಿ ಆಧರಿಸಿ ಅರಣ್ಯ ಪ್ರದೇಶದಲ್ಲಿ ಅಡಗಿಸಿಟ್ಟಿದ್ದ ಮತ್ತೊಂದು ಹ್ಯಾಂಡ್ ಗ್ರೆನೇಡ್ ಅನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: 2 ವರ್ಷದ ಬಳಿಕ ಆರ್ಬಿಐ ನಿಗದಿತ ಗರಿಷ್ಠ ಮಿತಿ ದಾಟಿದ ಹಣದುಬ್ಬರ; ಈರುಳ್ಳಿ, ಬೆಳ್ಳುಳ್ಳಿ ದರ ಗಗನಕ್ಕೆ
ಈ ಸಂಬಂಧ ತಂಗ್ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಶಪಡಿಸಿಕೊಂಡ ಸ್ಫೋಟಕಗಳ ಮೂಲ, ಅವುಗಳನ್ನು ಯಾವ ಉದ್ದೇಶಕ್ಕಾಗಿ ಬಳಸಲು ಯೋಜಿಸಲಾಗಿತ್ತು ಹಾಗೂ ಈ ಪ್ರಕರಣದಲ್ಲಿ ಬೇರೆ ಯಾರಾದರೂ ಸಂಪರ್ಕ ಹೊಂದಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಶಾಲೆಯ ಅಡುಗೆ ಕೋಣೆಗೆ ಬೆಂಕಿ ಹಚ್ಚಿ ಸಿಲಿಂಡರ್ ಸ್ಫೋಟಿಸಲು ಯತ್ನ – ಸ್ಥಳೀಯರಿಂದ ಪ್ರತಿಭಟನೆ
