ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಬೆಂಗಳೂರಿಗೆ (Bengaluru) ಆಗಮಿಸಿದ್ದಾರೆ. ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಅವರು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಜಿಗಣಿಯ ಪ್ರಶಾಂತಿ ಕುಟೀರಕ್ಕೆ ತೆರಳಿದ್ದಾರೆ.
ಮೋದಿ ಅವರನ್ನು ಸಿಎಂ ಡಿ.ಕೆ. ಶಿವಕುಮಾರ್ (D.K Shivakumar) ಅವರು ಸ್ವಾಗತಿಸಿದರು. ಈ ವೇಳೆ ರಾಜ್ಯಪಾಲರಾದ ಡಾ. ಸುಧಾ ಯಾದವ್ ಸಹ ಇದ್ದರು. ಇದನ್ನೂ ಓದಿ: Modi In Karnataka | ಬೆಂಗಳೂರಿಗೆ ಬಂದ ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಸ್ವಾಗತ
ಪ್ರಧಾನಿಯವರು ಬೆಂಗಳೂರಿನಲ್ಲಿ 15,600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ ತಾವರೆಕೆರೆಯಿಂದ ಐಐಎಂ (IIM) ಬೆಂಗಳೂರು ಮೆಟ್ರೋ ನಿಲ್ದಾಣದವರೆಗಿನ ಪಿಂಕ್ ಮೆಟ್ರೋ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದು, ಸ್ವತಃ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.
