ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಗಾಯಗೊಂಡಿದ್ದಾರೆ. ಬಲಗಾಲಿಗೆ ಗಂಭೀರ ಗಾಯವಾಗಿದ್ದು, ವೈದ್ಯರು 6 ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
Execution, not excuses. That’s what I believe in!
A few days ago, I had a major fall, doctor advised me to take complete rest for six weeks. But the teacher and administrator in me just cannot sit idle.
When work has to happen, you find a way! So, we’ve set up a bed right inside the classroom. I continue to engage with my students and, at the same time, attend to my constituency responsibilities from here.
Circumstances may slow you down, but they cannot stop you from doing what you believe in.
ಕಾಯಕವೇ ಕೈಲಾಸ! 🙏🏼
— Pradeep Eshwar (@Pradeep__Eshwar) November 13, 2026
ಕಾಲಿಗೆ ಗಾಯವಾಗಿ ಬ್ಯಾಂಡೇಜ್ ಹಾಕಿಸಿಕೊಂಡಿರುವ ಪ್ರದೀಪ್ ಈಶ್ವರ್, ಶಾಲೆಯ ತರಗತಿ ಕೊಠಡಿಯಲ್ಲೇ ಬೆಡ್ ವ್ಯವಸ್ಥೆ ಮಾಡಿಕೊಂಡು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಶಿಕ್ಷಕ ಹಾಗೂ ಆಡಳಿತಗಾರನಾಗಿರುವ ತಮಗೆ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕೆಲಸ ಆಗಬೇಕಾದಾಗ ಅದಕ್ಕೆ ದಾರಿ ಕಂಡುಕೊಳ್ಳಬೇಕು. ಹೀಗಾಗಿ ತರಗತಿಯಲ್ಲೇ ಬೆಡ್ ವ್ಯವಸ್ಥೆ ಮಾಡಿಕೊಂಡು ವಿದ್ಯಾರ್ಥಿಗಳೊಂದಿಗೆ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ. ಜೊತೆಗೆ ಕ್ಷೇತ್ರದ ಜವಾಬ್ದಾರಿಗಳನ್ನೂ ಇಲ್ಲಿಂದಲೇ ನಿರ್ವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
‘ಪರಿಸ್ಥಿತಿಗಳು ನಿಮ್ಮ ವೇಗವನ್ನು ಕಡಿಮೆ ಮಾಡಬಹುದು, ಆದರೆ ನೀವು ನಂಬಿರುವ ಕೆಲಸವನ್ನು ಮಾಡುವುದರಿಂದ ತಡೆಯಲು ಸಾಧ್ಯವಿಲ್ಲ’ ಎಂದು ತಮ್ಮ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡಿದ್ದಾರೆ.
