ಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ (Pink Line Metro) ಇಂದಿನಿಂದ ಸಾರ್ವಜನಿಕ ಸೇವೆಗೆ ಮುಕ್ತವಾಗಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಇಂದು ಬೆಳಿಗ್ಗೆ ಮಾನ್ಯ ಶ್ರೀ ಕೃಷ್ಣ ಬೈರೇಗೌಡ ಎಸ್ ಜಿ ಪಾಳ್ಯ ಮೆಟ್ರೋ ನಿಲ್ದಾಣಕ್ಕೆ ಬಂದು ಪ್ರಯಾಣಿಕರಿಗೆ ರೋಜ್ಸ್ ನೀಡುವ ಮೂಲಕ ಅವರನ್ನು ಸ್ವಾಗತಿಸಿದರು. https://t.co/q38xWeph7r
— ನಮ್ಮ ಮೆಟ್ರೋ (@OfficialBMRCL) November 14, 2026
ನಿನ್ನೆಯಷ್ಟೇ ಪಿಂಕ್ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಇಂದಿನಿಂದ ಸಾರ್ವಜನಿಕ ಸೇವೆ ಮುಕ್ತವಾಗಿದೆ. ಈ ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆ ಸುದ್ದುಗುಂಟೆಪಾಳ್ಯ ಮೆಟ್ರೋ ನಿಲ್ದಾಣಕ್ಕೆ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಭೇಟಿ ನೀಡಿದ್ದಾರೆ. ಮೆಟ್ರೋದಲ್ಲಿ ಪ್ರಯಾಣ ಆರಂಭಿಸುತ್ತಿದ್ದ ಪ್ರಯಾಣಿಕರಿಗೆ ಗುಲಾಬಿ ಹೂಗಳನ್ನ ನೀಡಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಬಳಿಕ ಸಚಿವರು ಮೆಟ್ರೋ ರೈಡ್ ನಡೆಸಿ, ಪ್ರಯಾಣಿಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪ್ರಯಾಣಿಕರು ಸಚಿವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಉತ್ಸಾಹ ತೋರಿದ್ದಾರೆ.
