ಉಡುಪಿ: ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ (Bhuvanendra College) ನಿವೃತ್ತ ಪ್ರಾಂಶುಪಾಲರಾದ ಡಾ.ಬಿ ಪದ್ಮನಾಭ ಗೌಡ (75) (Dr. B Padmanabha Gowda) ಇಂದು ನಿಧನರಾಗಿದ್ದಾರೆ.
ಅಸಂಖ್ಯಾತ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರವಾಗಿದ್ದ ಇವರು, ಯಕ್ಷಗಾನ ಕಲಾವಿದ (Yakshagana artist), ಕಾರ್ಕಳ ಸಾಹಿತ್ಯ ಸಂಘದ ಕಾರ್ಯದರ್ಶಿ, ಸಂಘಟಕರಾಗಿ ಗುರುತಿಸಿಕೊಂಡಿದ್ರು. ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆ ಮಾತ್ರವಲ್ಲದೇ ಸಾಂಸ್ಕೃತಿಕ ಲೋಕದ ಪರಿಚಯವನ್ನ ಮಾಡಿಕೊಟ್ಟ ಕೀರ್ತಿ ಇವರಿಗೆ ಸಲ್ಲುತ್ತದೆ.
ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಿಗೆ ಒತ್ತು ಕೊಟ್ಟು ಸದಾ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದರು. ಕಾಲೇಜಿನ ಕ್ಯಾಂಪಸ್ ನಲ್ಲಿ ಯಕ್ಷಗಾನ ಪ್ರೇಮವನ್ನು ಭಿತ್ತಿ ಕಲಾಪ್ರೇಮವನ್ನು ವಿದ್ಯಾರ್ಥಿಗಳಲ್ಲಿ ತುಂಬಿದವರು. ವಿದ್ಯಾರ್ಥಿಗಳ ಮನೋವಿಕಸನಕ್ಕೆ ಪೂರಕ ವಾತಾವರಣವನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ತಂದುಕೊಟ್ಟ ಹೆಗ್ಗಳಿಕೆ ಇವರದ್ದು.
