ತುಮಕೂರು: ಗಂಡ ಹೆಂಡತಿ ಜಗಳ ಬಿಡಿಸಲು ಹೋದ ಮಗನನ್ನೇ ತಂದೆ ಬರ್ಬರವಾಗಿ (Tumakuru Crime) ಕೊಲೆ ಮಾಡಿರುವ ಘಟನೆ ಕುಣಿಗಲ್ ತಾಲ್ಲೂಕಿನ ಚೌಡನಾಯಕನಪಾಳ್ಯ ಗ್ರಾಮದಲ್ಲಿ ನಡೆದಿದೆ.
16 ವರ್ಷದ ಸುನೀಲ್ ಕೊಲೆಯಾದ ಹುಡುಗ. ತಂದೆ ನಂಜೆಗೌಡ ಮಧ್ಯ ವ್ಯಸನಿಯಾಗಿದ್ದು, ಕುಡಿದು ಬಂದು ಪತ್ನಿ ರಂಜಿತಾಳೊಂದಿಗೆ ಆಗಾಗ ಜಗಳವಾಡುತ್ತಿದ್ದ. ಇದೇ ಕಾರಣಕ್ಕೆ ಈ ಹಿಂದೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲಿಗೆ ಹೋಗಿ ಬಂದಿದ್ದ.
ನಂಜೆಗೌಡ ಇಂದು ಬೆಳಗ್ಗೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದಾಗ, ಜಗಳ ತಾರಕಕ್ಕೇರಿ ರಂಜಿತಾ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಆಗ ಸುನೀಲ್ ಮಧ್ಯ ಪ್ರವೇಶಿಸಿ ಅವರ ಜಗಳ ಬಿಡಿಸಲು ಮುಂದಾಗಿದ್ದಾನೆ
ಈ ವೇಳೆ ಕೊಪಗೊಂಡ ನಂಜೆಗೌಡ ಪತ್ನಿಯನ್ನು ಮನೆಯಿಂದ ಆಚೆಗೆ ತಳ್ಳಿ ಬಾಗಿಲು ಹಾಕಿಕೊಂಡು ಮನೆಯಲ್ಲಿದ್ದ ಹಾರೆಕೋಲಿನಿಂದ ಮಗನ ಮೇಲೆ ಮನ ಬಂದಂತೆ ಹಲ್ಲೆ ನಡೆಸಿ ಕೊಲೆಗೈದು ವಿಕೃತಿ ಮೆರೆದಿದ್ದಾನೆ.ಇದನ್ನೂ ಓದಿ: ಮಂಡ್ಯ | ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕುಣಿಗಲ್ ಸಿಪಿಐ ಮಾಧ್ಯನಾಯಕ್ ಅವರು ನಂಜೆಗೌಡನನ್ನು ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: ನಮ್ಮ ಬಳಿ ಖಾಸಗಿ ಆಸ್ತಿ ಇದೆ ಅನ್ನೋದನ್ನ ಪ್ರೂವ್ ಮಾಡಿದ್ರೆ 1 ಕೋಟಿ ಬಹುಮಾನ ಕೊಡ್ತೀನಿ: ಯತ್ನಾಳ್
