ಮುಂಬೈ: ದೀಪಾವಳಿ ಹಬ್ಬದ ಪ್ರಯುಕ್ತ ಮನೆಗೆ ಭೇಟಿ ನೀಡಿದ್ದ 35 ವರ್ಷದ ಇಂಡಿಗೋ (IndiGo) ಉದ್ಯೋಗಿ ವರ್ಷಾ ತುರ್ಕರ್ ಅವರ ರಕ್ತಸಿಕ್ತ ಶವ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಕಾಡಿನಲ್ಲಿ ಪತ್ತೆಯಾಗಿದೆ.
ಪುಣೆ ವಿಮಾನ ನಿಲ್ದಾಣದ ಇಂಡಿಗೋ ಟಿಕೆಟ್ ಕೌಂಟರ್ನಲ್ಲಿ ಕೆಲಸ ಮಾಡುತ್ತಿದ್ದ ವರ್ಷಾ, ತನ್ನ ಎರಡೂವರೆ ವರ್ಷದ ಮಗಳೊಂದಿಗೆ ದೀಪಾವಳಿ ಆಚರಿಸಲು ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿರುವ ತನ್ನ ತಾಯಿಯ ಮನೆಗೆ ಪ್ರಯಾಣ ಬೆಳೆಸಿದ್ದರು. ಅವರು 2024 ರಲ್ಲಿ ವಿವಾಹವಾಗಿದ್ದರು. ಅವರ ಪತಿ ಪ್ರಸ್ತುತ ಇಂದೋರ್ನಲ್ಲಿ ವಾಸಿಸುತ್ತಿದ್ದಾರೆ.
ಮೃತದೇಹ ಪತ್ತೆಯಾದ ಬೊಂಡ್ರಾನಿ ಅರಣ್ಯ ಪ್ರದೇಶವು ನೆರೆಯ ಗೊಂಡಿಯಾ ಜಿಲ್ಲೆಯಲ್ಲಿದ್ದು, ಮಹಾರಾಷ್ಟ್ರ-ಮಧ್ಯಪ್ರದೇಶ ಗಡಿಗೆ ಹತ್ತಿರದಲ್ಲಿದೆ. ವರ್ಷಾ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಮನೆಯಿಂದ ಹೊರಟು ತನ್ನ ಸ್ನೇಹಿತ ನಿತೇಶ್ ಅಗರ್ವಾಲ್ ಜೊತೆ ವೈನ್ಗಂಗಾ ನದಿಯ ದಡಕ್ಕೆ ಹೋಗಿದ್ದರು. ಬಳಿಕ ಅಗರ್ವಾಲ್ ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರ-ಮಧ್ಯಪ್ರದೇಶ ಗಡಿಯ ಬಳಿಯ ಬಾಂಡ್ರಾನಿ ಅರಣ್ಯ ಪ್ರದೇಶಕ್ಕೆ ಸಂಬಂಧಿಕರು ತಲುಪಿದಾಗ, ವರ್ಷಾಳ ದೇಹದಲ್ಲಿ ತೀವ್ರ ರಕ್ತಸ್ರಾವವಾಗುತ್ತಿರುವುದು ಕಂಡುಬಂದಿತು. ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ರಾತ್ರಿ 7 ಗಂಟೆ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ವರ್ಷಾ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುತಿಸಲಾಗದ ಮುಸುಕುಧಾರಿ ವ್ಯಕ್ತಿಗಳು ತಮ್ಮ ಮೇಲೆ ದಾಳಿ ಮಾಡಿ ದರೋಡೆ ಮಾಡಿದ್ದಾರೆ ಎಂದು ಅಗರ್ವಾಲ್ ಆರೋಪಿಸಿದ್ದಾರೆ.
ಹಿಂಸಾತ್ಮಕ ದಾಳಿ ನಡೆದಿದೆ ಎಂದು ಹೇಳಿಕೊಂಡರೂ ಅಗರ್ವಾಲ್ಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದ ನಂತರ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ನೇಹಿತ ಅಗರ್ವಾಲ್ನನ್ನು ವಶಕ್ಕೆ ಪಡೆದಿದ್ದಾರೆ.
