ಅವ್ಯಾಚ ಶಬ್ದಗಳಿಂದ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್ ನೀಡಿದ ದೂರಿನ್ವಯ ಆರ್.ಆರ್. ನಗರ ಠಾಣೆ, ಭೋಜರಾಜ್ ರೈ ದೂರಿನ ಮೇರೆಗೆ ಬಸವೇಶ್ವರ ನಗರ ಠಾಣೆ ಹಾಗೂ ನಟ ಝೈದ್ ಖಾನ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ ನೀಡಿದ ದೂರಿನ ಅನ್ವಯ ಚಾಮರಾಜಪೇಟೆ ಮತ್ತು ಬ್ಯಾಟರಾನಪುರ ಪೊಲೀಸ್ ಠಾಣೆಗಳಲ್ಲಿ ಧನ್ವೀರ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.
ಈ ಎಲ್ಲಾ ಎಫ್ಐಆರ್ಗಳನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದೆ.
