ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ-ಸುಲ್ತಾನ್ ಬತ್ತೇರಿ ಮಾರ್ಗದಲ್ಲಿ ಕಾಡಾನೆ ದಾಳಿಗೆ ಮುಂದಾಗಿದ್ದು, ಬೈಕ್ ಸವಾರ ಜಸ್ಟ್ ಮಿಸ್ ಆಗಿದ್ದಾರೆ.
ರಸ್ತೆಯಲ್ಲೇ ನಿಂತಿದ್ದ ಕಾಡಾನೆಯನ್ನು ಪ್ರವಾಸಿಗರು ಕೆಣಕಿದ ಪರಿಣಾಮ, ಆಕ್ರೋಶಗೊಂಡ ಒಂಟಿ ಸಲಗ ವಾಹನಗಳ ಮೇಲೆ ದಾಳಿ ಮಾಡಲು ಮುಂದಾಗಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನೊಬ್ಬ ಕಾಡಾನೆಯ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.
ಕಾಡು ಪ್ರಾಣಿಗಳಿರುವ ಮಾರ್ಗದಲ್ಲಿ ಬೇಜವಾಬ್ದಾರಿಯಿಂದ ವರ್ತಿಸುವ ಪ್ರವಾಸಿಗರ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆನೆ ದಾಳಿಗೆ ಮುಂದಾದ ದೃಶ್ಯದ ವೀಡಿಯೊ ವೈರಲ್ ಆಗಿದೆ.
