ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ED) ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಮೇಲಿರುವ ಆರೋಪವನ್ನು ಕೆದಕಿ ಮಾಹಿತಿ ಪಡೆದಿದೆ.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (RDPR) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ನೇಮಕಾತಿ ಪರೀಕ್ಷೆಯ ಅಕ್ರಮಗಳ ಕುರಿತು ಇಡಿ ಅಧಿಕಾರಿಗಳು ಮಹತ್ವದ ವಿಚಾರಣೆ ನಡೆಸಿರುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿ ಲಭ್ಯವಾಗಿದೆ.
ಆರ್ಡಿಪಿಆರ್ ಇಲಾಖೆಯ ಎಇಇ ಪರೀಕ್ಷೆಯ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಶಿವಶಂಕರಪ್ಪ ಸಾಹುಕಾರ್, ಗ್ಯಾನೇಂದ್ರ ಮತ್ತು ಗೀತಾ ಅವರನ್ನು ವಿಚಾರಣೆಗೆ ಒಳಪಡಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.
ವಿಚಾರಣೆಯ ವೇಳೆ ಇಡಿ ಅಧಿಕಾರಿಗಳು, “ಆರ್ಡಿಪಿಆರ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಹಾಗೂ ಓಎಂಆರ್ ಶೀಟ್ಗಳನ್ನು ತಿದ್ದುಪಡಿ ಮಾಡಲಾಗಿದೆ” ಎಂಬ ಆರೋಪದ ಕುರಿತು ಸ್ಪಷ್ಟ ಉತ್ತರ ನೀಡುವಂತೆ ಮೂವರಿಗೂ ಸೂಚಿಸಿದ್ದಾರೆ. ಆದರೆ, ಅಧಿಕಾರಿಗಳ ಪ್ರಶ್ನೆಗಳಿಗೆ ಈ ಮೂವರು ಆರೋಪಿಗಳು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಾಜಿ ಆಗ್ತಿದ್ದಂತೆ ದೆಹಲಿಯಲ್ಲಿ ಸಿದ್ದರಾಮಯ್ಯ ಪವರ್ ಕಡಿಮೆಯಾಯ್ತಾ?
ಈ ಹಿಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೆಪಿಎಸ್ಸಿ ನೇಮಕಾತಿ ಅಕ್ರಮಗಳ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಇದೀಗ ಜಾರಿ ನಿರ್ದೇಶನಾಲಯವು ಆರ್ಡಿಪಿಆರ್ ಪರೀಕ್ಷೆಯ ಓಎಂಆರ್ ತಿದ್ದುಪಡಿ ವಿಚಾರವನ್ನು ಕೈಗೆತ್ತಿಕೊಂಡು ತನಿಖೆ ನಡೆಸುತ್ತಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
