– ಜೆಡಿಎಸ್ ಕಾರ್ಯಕರ್ತರಿಂದ ರಕ್ಷಣೆ ಪಡೆಯಲು ದೇವಸ್ಥಾನದ ಬಾಗಿಲು ಹಾಕಿಕೊಂಡೆವು
ರಾಮನಗರ: ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ದೇವಾಲಯ ಪ್ರವೇಶ ನಿರಾಕರಣೆ ಪ್ರಕರಣ ಹಿನ್ನಲೆ ದೇಗುಲದ ಗೇಟ್ಗೆ ಬೀಗ ಹಾಕಿದ್ದ ಕಾಂಗ್ರೆಸ್ ಕಾರ್ಯಕರ್ತರು (Congress Workers), ದೇವಾಲಯದ ಮುಂದೆಯೇ ನಿಂತು ನಿಖಿಲ್ ಕುಮಾರಸ್ವಾಮಿ ಅವರಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದ ಬಿಸಿಲು ಮಾರಮ್ಮ ದೇವಾಲಯದ ಉದ್ಘಾಟನಾ ಕಾರ್ಯಕ್ರಮದ ವೇಳೆ ನಿಖಿಲ್ ಕುಮಾರಸ್ವಾಮಿ ಅವರಿಗೆ ದೇಗುಲ ಪ್ರವೇಶ ನಿರಾಕರಿಸಿ ಬೀಗ ಹಾಕಲಾಗಿತ್ತು. ಈ ವಿಚಾರ ರಾಜ್ಯಮಟ್ಟದಲ್ಲಿ ದೊಡ್ಡ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ಅನಿಲ್, ರವಿ ಹಾಗೂ ಇತರರು ದೇಗುಲದ ಮುಂದೆ ನಿಂತು ಸ್ಪಷ್ಟನೆ ನೀಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಬರುವ ಮುನ್ನ ಕರೆಂಟ್ ಹೋಗಿತ್ತು. ಈ ವಿಚಾರಕ್ಕೆ ಜೆಡಿಎಸ್ ಕಾರ್ಯಕರ್ತರು ಆಯೋಜಕರ ಮೇಲೆ ಮುಗಿಬಿದ್ದು ಹಲ್ಲೆ ಮಾಡಲು ಬಂದರು. ಅವರಿಂದ ರಕ್ಷಣೆ ಪಡೆಯಲು ನಾವು ದೇವಾಲಯದ ಒಳಗೆ ಹೋಗಿ ಬಾಗಿಲು ಹಾಕಿಕೊಂಡೆವು ವಿನಃ, ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದಾರೆ.
ಘಟನೆ ಕುರಿತು ನಿಖಿಲ್ ಕುಮಾರಸ್ವಾಮಿ ಹಾಗೂ ರಾಜ್ಯದ ಜನತೆಯಲ್ಲಿ ಕ್ಷಮೆಯಾಚಿಸಿರುವ ಅವರು, ಮುಂದೆ ನಿಖಿಲ್ ಯಾವಾಗ ಗ್ರಾಮಕ್ಕೆ ಬಂದರೂ ನಾವೇ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.ಇದನ್ನೂಓದಿ: ಶಾರ್ಟ್ ಸರ್ಕ್ಯೂಟ್ನಿಂದ ಆಟೋಮೊಬೈಲ್ ಗ್ಯಾರೇಜ್ಗೆ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ
ಆಗಿದ್ದೇನು?
13 ನೇ ದಿನಾಂಕಿನಂದು ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಆಗಿರೋ ಮಾರಮ್ಮ ದೇವಾಲಯದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮ ನಿಗದಿಯಾಗಿತ್ತು. ಈ ಹಿನ್ನೆಲೆ ದೇವಾಲಯಕ್ಕೆ ನಿಖಿಲ್ ಭೇಟಿ ಕೊಟ್ಟಿದ್ದರು. ಆದ್ರೆ ನಿಖಿಲ್ ಭೇಟಿ ವೇಳೆ ದೇವಾಲಯಕ್ಕೆ ಕಾಂಗ್ರೆಸ್ನ ಕಾರ್ಯಕರ್ತರು ಬೀಗ ಜಡಿದಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರಿಂದ ನಿಖಿಲ್ ಅವರು ದೇವರ ದರ್ಶನ ಪಡೆಯದೇ ವಾಪಸ್ಸ್ ತೆರಳಿದ್ದರು.
ಬಳಿಕ ಜೆಡಿಎಸ್-ಕಾಂಗ್ರೇಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದ್ದರು.ಇದನ್ನೂ ಓದಿ: ಕಾಡಾನೆಗಳನ್ನು ನಮ್ಮ ಜಿಲ್ಲೆಗೆ ಓಡಿಸಿದ್ರೆ ಉಗ್ರ ಹೋರಾಟ – ಸರ್ಕಾರಕ್ಕೆ ಮೂಡಿಗೆರೆ ಜನರಿಂದ ಎಚ್ಚರಿಕೆ
