ಈ ಕುರಿತು ಲೋಕೋಪಯೋಗಿ ಇಲಾಖೆ ಸಚಿವ ಪ್ರವೇಶ್ ಸಾಹಿಬ್ ಸಿಂಗ್ ವರ್ಮಾ ಮಂಗಳವಾರ (ನ.17) ಮಾಹಿತಿ ನೀಡಿದ್ದಾರೆ. ಮುಂದಿನ ವಾರದಿಂದ ಸಾರ್ವಜನಿಕರಿಗೆ ನಿವಾಸ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಟಿಕೆಟ್ ಮತ್ತು ಮುಂಗಡ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿಖಿಲ್ಗೆ ದೇಗುಲ ಪ್ರವೇಶ ನಿರಾಕರಣೆ ವಿವಾದ; ಕಾಂಗ್ರೆಸ್ ಕಾರ್ಯಕರ್ತರಿಂದ ಬಹಿರಂಗ ಕ್ಷಮೆಯಾಚನೆ
ಮೊದಲ ಹಂತದಲ್ಲಿ ರಾಷ್ಟ್ರೀಯ ಮಾಧ್ಯಮ ಪ್ರತಿನಿಧಿಗಳಿಗೆ ನಿವಾಸ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಬಳಿಕ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗುವುದು. ಟಿಕೆಟ್ ದರ, ಆನ್ಲೈನ್ ಕಾಯ್ದಿರಿಸುವಿಕೆ ಸೇರಿದಂತೆ ಪ್ರವೇಶಕ್ಕೆ ಸಂಬಂಧಿಸಿದ ವಿವರಗಳನ್ನು ಮುಂದಿನ ವಾರ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಈ ಹಿಂದೆ ಶೀಶ್ ಮಹಲ್ ಅನ್ನು ರಾಜ್ಯ ಅತಿಥಿಗೃಹವನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಇತ್ತು. ಆದರೆ ಸಾರ್ವಜನಿಕರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅದನ್ನು ವೀಕ್ಷಣೆಗೆ ಮುಕ್ತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಕೇಜ್ರಿವಾಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಿವಾಸದ ನವೀಕರಣಕ್ಕೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ ಎಂಬ ಆರೋಪ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ನಿವಾಸದಲ್ಲಿನ ದುಬಾರಿ ಸೌಲಭ್ಯಗಳು ಮತ್ತು ನವೀಕರಣ ಕಾಮಗಾರಿಗಳ ವೆಚ್ಚದ ಕುರಿತು ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷದ ನಡುವೆ ವಾಗ್ವಾದ ನಡೆದಿತ್ತು. ಇದೀಗ ಈ ನಿವಾಸವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲು ದೆಹಲಿ ಸರ್ಕಾರ ಮುಂದಾಗಿದೆ.ಇದನ್ನೂ ಓದಿ: ಶೀಘ್ರದಲ್ಲೇ 33% ಮಹಿಳಾ ಮೀಸಲಾತಿ ಜಾರಿ: ಓಂ ಬಿರ್ಲಾ
