ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ (Chikkaballapura) ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಶಾಸಕ ಪ್ರದೀಪ್ ಈಶ್ವರ್ ಹಾಗೂ ಪತ್ನಿ ನಯನ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಕುಟುಂಬಕ್ಕೆ ಮಹಾಲಕ್ಷ್ಮಿಯ ಆಗಮನವಾಗಿದೆ.
ತಂದೆಯಾಗಿರುವ ಸಂತಸದ ವಿಚಾರವನ್ನು ಶಾಸಕ ಪ್ರದೀಪ್ ಈಶ್ವರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ನವಜಾತ ಹೆಣ್ಣು ಮಗುವನ್ನು ಕೈಯಲ್ಲಿ ಎತ್ತಿಕೊಂಡು ಮುದ್ದಾಡುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿರುವ ಶಾಸಕರು, ತಮ್ಮ ಜೀವನದ ಈ ವಿಶೇಷ ಕ್ಷಣದ ಸಂತಸವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಚಳಿಯಲ್ಲೂ ಮುಂದುವರಿದ ಆಶಾ ಕಾರ್ಯಕರ್ತೆಯರ ಹೋರಾಟ; ಪುಟ್ಟ ಮಕ್ಕಳೊಂದಿಗೆ ಅಹೋರಾತ್ರಿ ಧರಣಿ
ಇನ್ನು ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ತಮ್ಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ತಂದೆಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿತೈಷಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ನಯನ ಹಾಗೂ ಪ್ರದೀಪ್ ಈಶ್ವರ್ ದಂಪತಿಗೆ ಮಹಾಲಕ್ಷ್ಮಿಯ ಆಗಮನವಾಗಿರುವುದಕ್ಕೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ವ್ಯಕ್ತವಾಗುತ್ತಿವೆ. ಇದನ್ನೂ ಓದಿ: ಭದ್ರತಾ ಪಡೆಗಳ ಎನ್ಕೌಂಟ್ಗೆ ಲಷ್ಕರ್ ಉಗ್ರ ಲತೀಫ್ ಭಟ್ ಬಲಿ
