ಮೈಸೂರು: ಇಲ್ಲಿನ (Mysyru) ಅರಣ್ಯ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಲಯ ಅರಣ್ಯಾಧಿಕಾರಿ (RFO) ಸುರೇಂದ್ರ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ ವೇಳೆ ಆದಾಯಕ್ಕಿಂತ ಅಧಿಕ ಆಸ್ತಿ ಪತ್ತೆಯಾಗಿದೆ. ಗಳಿಕೆಗಿಂತ 130% ಅಧಿಕ ಆಸ್ತಿ ಇರುವುದನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ದಾಳಿ ವೇಳೆ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ 12 ಮನೆಗಳನ್ನು ಹೊಂದಿರುವುದು ಗೊತ್ತಾಗಿದೆ. ಅಲ್ಲದೇ ಮನೆಯಲ್ಲಿ 350ಗ್ರಾಂ ಚಿನ್ನ ಸಹ ಪತ್ತೆಯಾಗಿದೆ. ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ನ.18 ರಂದು ಚಾಮರಾಜನಗರ ಲೋಕಾಯುಕ್ತ ಪೊಲೀಸರು ಅರಣ್ಯಾಧಿಕಾರಿ ಸುರೇಂದ್ರ ಅವರ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹೊಂದಿರುವುದು ದೃಢಪಟ್ಟಿದೆ. ಸ್ಥಿರ ಮತ್ತು ಚರಾಸ್ತಿಗಳಿಗೆ ಸಂಬಂಧಿಸಿದ ದಾಖಲಾತಿಗಳನ್ನು ಅಮಾನತುಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರೋಪಿತ ಸರ್ಕಾರಿ ಅಧಿಕಾರಿಯ ಮನೆ ಹಾಗೂ ಕಛೇರಿಗಳ ಮೇಲೆ ಚಾಮರಾಜನಗರ ಮತ್ತು ಮೈಸೂರು ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿ ದಾಳಿ ನಡೆಸಿದ್ದರು. ಇದನ್ನೂ ಓದಿ: ಮಾಫಿಯಾ, ಅಶಿಸ್ತು ಸಹಿಸಲ್ಲ: ಮೊದಲ ದಿನವೇ ಬೆಂಗಳೂರು ಪೊಲೀಸರಿಗೆ ಹಿತೇಂದ್ರ ಎಚ್ಚರಿಕೆ
