-ಕ್ರೈಸ್ ವಸತಿ ಶಾಲೆ ಲಿಖಿತ ಪರೀಕ್ಷೆ ಕುರಿತು ಸ್ಪಷ್ಟನೆ
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ (Medical Course) ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವವರಿಗೆ ಮುಂಗಡ ಹಣ ಪಾವತಿಸಲು ನ.21ರವರೆಗೂ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ಅವರು ತಿಳಿಸಿದ್ದಾರೆ.
ನ.23ರಂದು ಬೆಳಿಗ್ಗೆ 11 ಗಂಟೆವರೆಗೆ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಸೀಟು ಹಂಚಿಕೆ ಫಲಿತಾಂಶ ಸೇರಿದಂತೆ ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆಗೆ ಕೋಟಿ ಕೋಟಿ ಸುರಿದಿದ್ದು ಮೂರ್ಖತನ – ಟ್ರಂಪ್ ಬಣದಿಂದ ದೂರ ಸರಿದರಾ ಎಲೋನ್ ಮಸ್ಕ್?
ಕ್ರೈಸ್ ವಸತಿ ಶಾಲೆ ಲಿಖಿತ ಪರೀಕ್ಷೆ ಕುರಿತು ಸ್ಪಷ್ಟನೆ:
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಲ್ಲಿನ ಉಳಿಕೆ ಮೂಲ ವೃಂದದ (RPC) ಹುದ್ದೆಗಳಿಗೆ ನ.22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿದೆ. ನ.22ರಂದು ಬೆಳಗಿನ ಅವಧಿಯಲ್ಲಿ ಎಲ್ಲ ವಿಷಯಗಳ ಅಭ್ಯರ್ಥಿಗಳಿಗೆ ಸಾಮಾನ್ಯ ಜ್ಞಾನ ಪತ್ರಿಕೆಯ ಪರೀಕ್ಷೆ ಇರುತ್ತದೆ.
ಮಧ್ಯಾಹ್ನದ ಅವಧಿಯಲ್ಲಿ ಕನ್ನಡ ಮತ್ತು ವಿಜ್ಞಾನ ವಿಷಯಗಳ ನಿರ್ದಿಷ್ಟ ಪತ್ರಿಕೆ-2ಗಳಿಗೆ ಮಾತ್ರ ಪರೀಕ್ಷೆ ಇರುತ್ತದೆ. ಉಳಿದ ವಿಷಯಗಳ ನಿರ್ದಿಷ್ಟ ಪತ್ರಿಕೆಗಳ ವೇಳಾಪಟ್ಟಿ ಬೇರೆಯೇ ಇದ್ದು, ಆ ಪ್ರಕಾರ ಮುಂದಿನ ದಿನಗಳಲ್ಲಿ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಕೋರಿದ್ದಾರೆ.ಇದನ್ನೂ ಓದಿ: ವ್ಯಕ್ತಿ ಕಾಣೆಯಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್ – ಬಾವಿಯಲ್ಲಿ ಶವ ಪತ್ತೆ, ವೈದ್ಯ ಸೇರಿ ನಾಲ್ವರು ಅರೆಸ್ಟ್
