ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರ ತಾಯಿ ಅವರಿಂದು ಕೊನೆಯುಸಿರೆಳೆದಿದ್ದು, ಪ್ರಧಾನಿ ಮೋದಿ (PM Modi) ದೂರವಾಣಿ ಮೂಲಕ ಸಂತಾಪ ಸೂಚಿಸಿದ್ದಾರೆ.
ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರಿಂದು (ನ.20) ದೀರ್ಘಕಾಲದ ಅನಾರೋಗ್ಯದಿಂದ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪ್ರಧಾನಿ ಮೋದಿ ಅವರು ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿ, ಸಂತಾಪ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಮಾತೃ ವಿಯೋಗ
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಎಕ್ಸ್ನಲ್ಲಿ, ಸಾವಿತ್ರಿ ದೇವಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ತಾಯಿಯ ಅಗಲಿಕೆಯನ್ನು ಜೀವನದ ಆಘಾತಗಳಲ್ಲಿ ಒಂದು ಎಂದು ಬಣ್ಣಿಸಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಈ ಸಾವನ್ನು ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕ ಎಂದು ಹೇಳಿದ್ದು, ಕುಟುಂಬಕ್ಕೆ ಇದು ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ. ಅಲ್ಲದೆ, ಈ ನಷ್ಟವನ್ನು ಎದುರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡುವಂತೆ ಪ್ರಾರ್ಥಿಸಿದ್ದಾರೆ.ಇದನ್ನೂ ಓದಿ: ತಾಜ್ ಮಹಲ್, ನಿಜಾಮುದ್ದೀನ್ ದರ್ಗಾಕ್ಕೆ ಪಾಕ್ ಸಚಿವರ ಭೇಟಿಗೆ ಭಾರತ ನಿರಾಕರಣೆ
ತಾಯಿಯ ನಿಧನದ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಗೊಂಡಾ ಭೇಟಿಯನ್ನು ರದ್ದುಪಡಿಸಲಾಗಿದೆ. ಯೋಗಿ ಆದಿತ್ಯನಾಥ್ ಅವರು ಗೋರಖ್ಪುರದಿಂದ ನೇರವಾಗಿ ಲಕ್ನೋಗೆ ತೆರಳಿ, ಅಲ್ಲಿಂದ ವಿಮಾನ ನಿಲ್ದಾಣದ ಮೂಲಕ ತಾಯಿಗೆ ಅಂತಿಮ ನಮನ ಸಲ್ಲಿಸಲು ಉತ್ತರಾಖಂಡದ ಪೌರಿ ಗರ್ವಾಲ್ಗೆ ಪ್ರಯಾಣ ಬೆಳೆಸಿದ್ದಾರೆ.
ಕಳೆದ ಕೆಲವು ತಿಂಗಳುಗಳಲ್ಲಿ ಯೋಗಿ ಆದಿತ್ಯನಾಥ್ ಅವರು ಹಲವು ಬಾರಿ ಆಸ್ಪತ್ರೆಗೆ ತೆರಳಿ ತಾಯಿಯನ್ನು ಭೇಟಿಯಾಗಿದ್ದರು. ಪೌರಿ ಗರ್ವಾಲ್ ಎಸ್ಎಸ್ಪಿ ಸರ್ವೇಶ್ ಪನ್ವಾರ್ ಅವರು ಸಾವಿತ್ರಿ ದೇವಿ ಅವರ ನಿಧನವನ್ನು ದೃಢಪಡಿಸಿದ್ದು, ಸ್ಥಳೀಯ ಆಡಳಿತವು ಕುಟುಂಬದ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ. ಶನಿವಾರ ಹರಿದ್ವಾರದಲ್ಲಿ ಅವರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ.ಇದನ್ನೂ ಓದಿ: ED ಅಧಿಕಾರ ಮರುಪರಿಶೀಲನೆ ಕೋರಿ ಅರ್ಜಿ – ಜನವರಿಯಲ್ಲಿ ವಿಚಾರಣೆ ನಡೆಸಲಿರುವ ಸುಪ್ರೀಂ
