ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧದ ಸ್ಟಿಂಗ್ ಆಪರೇಷನ್ (Sting Operation) ಪ್ರಕರಣಕ್ಕೆ ಕೃಪಾ ಆಳ್ವಾ ಸೇರಿದಂತೆ 6 ಮಂದಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾಗೆ (Kripa Alva) ಬಂಧನದ ಭೀತಿ ಎದುರಾಗಿದೆ. ಸ್ಟಿಂಗ್ ಪ್ರಕರದಲ್ಲಿ 6 ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಯನ್ನ ಕೋರ್ಟ್ ವಜಾ ಮಾಡಿ ಆದೇಶಿಸಿದೆ. ಕೃಪಾ ಆಳ್ವಾ, ಜೆಡಿಎಸ್ ಸೋಷಿಯಲ್ ಮೀಡಿಯಾ ಕಾರ್ಯಕರ್ತರರಾದ ಪ್ರಜ್ವಲ್ ಪ್ರಸಾದ್, ಚಂದನ್ ಹೆಚ್.ಎಸ್, ಕೆವಿ ಪ್ರಶಾಂತ್ ಕುಮಾರ್, ವಿನೋದ್ ಕುಮಾರ್ ಸೇರಿ 6 ಮಂದಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನ ಕೋರ್ಟ್ ವಜಾ ಮಾಡಿದೆ. ಇದನ್ನೂ ಓದಿ: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಸಂಚಲನ – ದಿಲ್ಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ
ವಾದ-ಪ್ರತಿವಾದ ಆಲಿಸಿ ಇಂದು 66ನೇ ಸಿಸಿಹೆಚ್ ಕೋರ್ಟ್ ಆದೇಶವನ್ನ ಕಾಯ್ದಿರಿಸಿತ್ತು. ಸೆಪ್ಟೆಂಬರ್ 27 ರಂದು ‘ಕರ್ನಾಟಕ ಹನಿಟ್ರ್ಯಾಪ್’ ಹೆಸರಿನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟವಾಗಿ, ಬಳಿಕ ಸಿದ್ದರಾಮಯ್ಯ ಅವರು ಅಕ್ಟೋಬರ್ 6ರಂದು ಪೊಲೀಸರಿಗೆ ದೂರು ನೀಡಿದ್ದರು.
ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಹಿರಂಗವಾಗಿಯೇ ಕೃಪಾ ಆಳ್ವಾರ ಹೆಸರು ಹೇಳಿದ್ದರು. ಇದರ ಬೆನ್ನಲ್ಲೇ ಕೃಪಾ ಖುದ್ದಾಗಿ ಸಿಸಿಬಿ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದರು. ಇದೀಗ ಕೋರ್ಟ್ ಕೃಪಾ ಆಳ್ವಾ ಅರ್ಜಿ ವಜಾ ಮಾಡಿದೆ. ಇದನ್ನೂ ಓದಿ: ಸಿದ್ರಾಮಯ್ಯ ವಿರುದ್ಧದ ಸ್ಟಿಂಗ್ ಕೇಸ್ – ಕೃಪಾ ಆಳ್ವಾ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು
