ಇಂಫಾಲ್: ಮಣಿಪುರದ (Manipur) ಚಾಂಡೆಲ್ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಅಕ್ರಮ ವಿಷಕಾರಿ ಮದ್ಯ ಸೇವಿಸಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ.
ರಾಜ್ಯ ರಾಜಧಾನಿ ಇಂಫಾಲ್ನ ಎರಡು ಆಸ್ಪತ್ರೆಗಳಲ್ಲಿ ಕನಿಷ್ಠ 181 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯುಮ್ನಾಮ್ ಖೇಮ್ಚಂದ್ ಸಿಂಗ್ ಹೇಳಿದ್ದಾರೆ.
ಶುಕ್ರವಾರ ಸಂಜೆ ಮುಖ್ಯಮಂತ್ರಿ ಯುಮ್ನಾಮ್ ಖೇಮ್ಚಂದ್ ಸಿಂಗ್ ಅವರು ಎರಡು ಆಸ್ಪತ್ರೆಗಳಿಗೆ ಭೇಟಿ ನೀಡಿದ ರೋಗಿಗಳ ಆರೋಗ್ಯ ವಿಚಾರಿಸಿದರು. ಸಿಂಗ್ ಅವರು ಲ್ಯಾಂಫೆಲ್ಪಟ್ನ ಶಿಜಾ ಆಸ್ಪತ್ರೆಯಲ್ಲಿ 140 ರೋಗಿಗಳು ದಾಖಲಾಗಿದ್ದಾರೆ ಮತ್ತು ಸಜಿವಾದ ಬಬಿನಾ ಆಸ್ಪತ್ರೆಯಲ್ಲಿ 41 ರೋಗಿಗಳು ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ.
ರೋಗಿಗಳಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಆರೈಕೆ ಮತ್ತು ಅಗತ್ಯವಿರುವ ಎಲ್ಲಾ ಬೆಂಬಲವನ್ನು ಖಚಿತಪಡಿಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಆಸ್ಪತ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
