ಇಂಫಾಲ್: ಮಣಿಪುರದ (Manipur) ಚಾಂಡೆಲ್ ಜಿಲ್ಲೆಯಲ್ಲಿ ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿದವರ (Manipur Liquor Tragedy) ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 180ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ನವೆಂಬರ್ 18 ರಿಂದ 20ರ ವರೆಗೆ ಈ ಸರಣಿ ಸಾವಾಗಿದೆ. ಅಸ್ವಸ್ಥಗೊಂಡವರನ್ನು ಇಂಫಾಲ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಶಿಜಾ ಆಸ್ಪತ್ರೆ ಮತ್ತು ಬಬಿನಾ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅಸ್ವಸ್ಥರನ್ನು ದಾಖಲಿಸಲಾಗಿದೆ. ಅದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮಣಿಪುರದಲ್ಲಿ ವಿಷಕಾರಿ ಮದ್ಯ ಸೇವಿಸಿ 11 ಸಾವು; 181 ಮಂದಿ ಆಸ್ಪತ್ರೆಗೆ ದಾಖಲು
ಮುಖ್ಯಮಂತ್ರಿ ಯುಮ್ನಮ್ ಖೇಮಚಂದ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಅಲ್ಲದೇ ರೋಗಿಗಳಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಆರೈಕೆ ಮತ್ತು ಅಗತ್ಯವಿರುವ ಎಲ್ಲಾ ಬೆಂಬಲವನ್ನು ಖಚಿತಪಡಿಸಿಕೊಳ್ಳುವಂತೆ ಅವರು ಆಸ್ಪತ್ರೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ದುರಂತಕ್ಕೆ ಕಾರಣವಾದ ಮದ್ಯ ಎಲ್ಲಿಂದ ಬಂದಿದೆ. ಈ ಸಾವಿಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಕರೆಂಟ್ ಶಾಕ್ ನೀಡಿ ತಪ್ಪೊಪ್ಪಿಗೆ, ಅಕ್ರಮ ಸಂಬಂಧದ ಕಟ್ಟು ಕಥೆ – ಚಾರ್ಜ್ಶೀಟ್ನಲ್ಲಿ ಪಾಂಡವಪುರ ಪೊಲೀಸರ ಕಳ್ಳಾಟ ಬಯಲು
