ಬೆಂಗಳೂರು: ಬೆಳಗಾವಿ ಪೊಲೀಸರು ಜಾರಿಗೊಳಿಸಿದ್ದ ಲುಕ್ಔಟ್ ನೋಟಿಸ್ (Lookout Notice) ಹಿನ್ನೆಲೆಯಲ್ಲಿ ಬಸವ ಮಂಟಪ ಕೃತಿಯ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
ಲೇಖಕ ರವಿ ಹಂಜ್ ಅವರ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾರ್ಕೆಟ್ ಠಾಣೆಯ ಪೊಲೀಸರು ಈ ಹಿಂದೆ ಅವರ ವಿರುದ್ಧ ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದರು. ಇದನ್ನೂ ಓದಿ: ಪ್ರತಿ ವಾಕ್ಯಕ್ಕೂ ಐತಿಹಾಸಿಕ ಸಾಕ್ಷಿ ಪುರಾವೆಗಳಿವೆ, ಜೈಲಿಗೆ ಹೋಗಲು ಸಿದ್ಧ: ಲೇಖಕ ರವಿ ಹಂಜ್
ಈ ಹಿನ್ನೆಲೆಯಲ್ಲಿ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ಅವರನ್ನು ತಡೆದು ವಶಕ್ಕೆ ಪಡೆದಿರುವ ಏರ್ಪೋರ್ಟ್ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ, ತಕ್ಷಣವೇ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಗೆ ಈ ಕುರಿತು ಮಾಹಿತಿ ರವಾನಿಸಿದ್ದಾರೆ. ಸದ್ಯ ಬೆಳಗಾವಿ ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆ ಹಾಗೂ ರವಿ ಹಂಜ್ ಅವರನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.
