ಹೈದರಾಬಾದ್: ಯುವ ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣಗಳನ್ನು ಸಸ್ಪೆಂಡ್ ಮಾಡಿದ್ದಕ್ಕೆ ಪಕ್ಷದ ಕಾರ್ಯಕರ್ತರು ಹೈದರಾಬಾದ್ನಲ್ಲಿರುವ ಮೆಟಾ ಕಚೇರಿ ಎದುರು ಪ್ರತಿಭಟನೆ ನಡೆಸಿ, ಹೂವಿನ ಕುಂಡಗಳನ್ನು ಎಸೆದು ಧ್ವಂಸಗೊಳಿಸಿದ್ದಾರೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ರಾಷ್ಟ್ರೀಯ ಉಸ್ತುವಾರಿ ಮನೀಶ್ ಶರ್ಮಾ ಅವರ ಸಾಮಾಜಿಕ ಜಾಲತಾಣಗಳ ಮೇಲೆ ಮೆಟಾ ನಿರ್ಬಂಧ ವಿಧಿಸಿದೆ. ಇದನ್ನು ವಿರೋಧಿಸಿ ರಾಜ್ಯ ಅಧ್ಯಕ್ಷ ಜಕ್ಕಿಡಿ ಶಿವಚರಣ್ ರೆಡ್ಡಿ ನೇತೃತ್ವದಲ್ಲಿ IYC ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ವೇಳೆ, ಮೆಟಾ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲೂ ರಾಜಕೀಯ ಬೆರೆಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಒಂದು ವಾರದಲ್ಲಿ ಸಾಮಾಜಿಕ ಜಾಲತಾಣಗಳು ಸರಿಯಾಗಬೇಕು. ಡಿಲೀಟ್ ಆಗಿರುವ ಪೋಸ್ಟ್ಗಳನ್ನು ಪುನಃಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ತಮ್ಮ ಬೇಡಿಕೆಗಳು ಈಡೇರದಿದ್ದರೆ ಕೋರ್ಟ್ನಲ್ಲಿ ಹೋರಾಡುತ್ತೇವೆ. ಅಲ್ಲದೇ ಈ ವಿಚಾರವಾಗಿ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತೇವೆ. ಮೆಟಾ ಕಚೇರಿಗೂ ನುಗ್ಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮುಂಬೈನಲ್ಲೂ ಪ್ರತಿಭಟನೆ
ಯುವ ಕಾಂಗ್ರೆಸ್ ನಾಯಕರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸ್ಥಗಿತಗೊಳಿಸಿದ ವಿಚಾರಕ್ಕೆ ಮುಂಬೈ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಕೆಸಿಯಲ್ಲಿರುವ ಮೆಟಾ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಟೀಕಿಸುವ ಧ್ವನಿಗಳನ್ನು ಅಡಗಿಸಲು ಸಾಮಾಜಿಕ ಜಾಲತಾಣ ನಿರ್ಬಂಧಿಸಲಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.
ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷೆ ಜೀನತ್ ಶಬ್ರಿನ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರ ಪೋಸ್ಟರ್ನ್ನು ಸುಟ್ಟುಹಾಕಿದ್ದಾರೆ. ಅಲ್ಲದೇ ಮೆಟಾ ಬಿಜೆಪಿ ಪರವಾಗಿದೆ ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದಾರೆ.
ವಿದೇಶಿ ಕಂಪನಿಗಳು ಭಾರತದಲ್ಲಿ ರಾಜಕೀಯ ಅಲ್ಲ, ವ್ಯವಹಾರ ಮಾಡಬೇಕು: ಅಖಿಲೇಶ್ ಯಾದವ್
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಎಕ್ಸ್ನಲ್ಲಿ ಮೆಟಾವನ್ನು ಟೀಕಿಸಿದ್ದಾರೆ. ವಿದೇಶಿ ಕಂಪನಿಗಳು ನಮ್ಮ ದೇಶದಲ್ಲಿ ರಾಜಕೀಯವಲ್ಲ, ವ್ಯವಹಾರ ನಡೆಸಬೇಕು. ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸರ್ಕಾರವು ಸಹ ವಿದೇಶಿ ಕಂಪನಿಗಳ ಮೇಲೆ ಅನಗತ್ಯ ಒತ್ತಡ ಹೇರುವ ಮೂಲಕ ಅವರ ವ್ಯವಹಾರಗಳನ್ನು ರಾಜಕೀಯಗೊಳಿಸಬಾರದು ಎಂದು ಬರೆದುಕೊಂಡಿದ್ದಾರೆ.
हमारे देश में दूसरे देश की कंपनियाँ अपना व्यवसाय करें; राजनीति नहीं। सबको बराबर मानकर चलना ही एक अच्छी समावेशी कंपनी की पहचान होती है।
सरकार भी विदेशी कंपनियों पर अवांछित दबाव डालकर, उनके व्यवसाय का राजनीतिकरण न करे।
#Meta
— Akhilesh Yadav (@yadavakhilesh) November 20, 2026
ಪ್ರತಿಭಟನೆಗೆ ಬಿಜೆಪಿ ಟೀಕೆ
ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯನ್ನು ಬಿಜೆಪಿ ಖಂಡಿಸಿದೆ. ಕಾಂಗ್ರೆಸ್ ಗೂಂಡಾಗಳ ಪಕ್ಷ ಎಂದು ಕರೆದಿದೆ.
Congress is a party of goons!
Goons of Indian Youth Congress are not only vandalised and destroyed Meta’s office in Hyderabad, & also are flaunting it on social media!
Recall how they insulted India at World AI Summit by barging naked at the Summit!
Rahul Gandhi’s party Congress is a party of goons!
This is Congress Model: Vandalise offices of Private companies!
This is why when Congress was in power India was a fragile five economy!
Every Indian who believes in Growth Should Oppose Congress Vandalism!
— Pradeep Bhandari(प्रदीप भंडारी)🇮🇳 (@pradip103) November 21, 2026
ಭಾರತೀಯ ಯುವ ಕಾಂಗ್ರೆಸ್ನ ಗೂಂಡಾಗಳು ಹೈದರಾಬಾದ್ನಲ್ಲಿರುವ ಮೆಟಾ ಕಚೇರಿಯ ಮೇಲೆ ದಾಳಿ ಮಾಡಿದ್ದಾರೆ. ದಾಳಿಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿಯೂ ಪ್ರಕಟಿಸುತ್ತಿದ್ದಾರೆ. ರಾಹುಲ್ ಗಾಂಧಿಯವರ ಪಕ್ಷ ಗೂಂಡಾಗಳ ಪಕ್ಷ. ಇದು ಕಾಂಗ್ರೆಸ್ ಮಾದರಿ ಎಂದು ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಟೀಕಿಸಿದ್ದಾರೆ.
