ನವದೆಹಲಿ: ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರು ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟು ಅಂತಿಮ ವಿದಾಯ ಹೇಳಿದರು.
91 ವರ್ಷದ ಸಾವಿತ್ರಿ ದೇವಿ ಅವರು ಶುಕ್ರವಾರ ವಿಧಿವಶರಾಗಿದ್ದರು ಶನಿವಾರ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿರುವ ತಮ್ಮ ಪೂರ್ವಿಕರ ಗ್ರಾಮವಾದ ಪಂಚೂರ್ನಲ್ಲಿ ಸಾವಿತ್ರಿ ದೇವಿ ಅವರ ಅಂತ್ಯಸಂಸ್ಕಾರ ನಡೆಯಿತು.
ತಾಯಿಯ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ಅಂತಿಮ ನಮನ ಸಲ್ಲಿಸಿದ ಯೋಗಿ ಆದಿತ್ಯನಾಥ್, ಕುಟುಂಬಸ್ಥರು ಮತ್ತು ನೆರೆದಿದ್ದವರ ಸಮ್ಮುಖದಲ್ಲಿ ಭಾವುಕರಾದರು. ತಾಯಿಯ ನಿಧನದ ಬಳಿಕ ಸಾಮಾಜಿಕ ಜಾಲತಾಣ “ಅಮ್ಮ… ಓಂ ಶಾಂತಿ” ಎಂದು ಬರೆದುಕೊಳ್ಳುವ ಮೂಲಕ ಮುಖ್ಯಮಂತ್ರಿಗಳು ಭಾವನಾತ್ಮಕ ಶ್ರದ್ಧಾಂಜಲಿ ಸಲ್ಲಿಸಿದ್ದರು.
ಸಾವಿತ್ರಿ ದೇವಿ ಅವರ ನಿಧನದಿಂದ ಪಂಚೂರ್ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಶೋಕದ ಛಾಯೆ ಆವರಿಸಿದ್ದು, ಪಕ್ಷಾತೀತವಾಗಿ ಹಲವು ರಾಜಕೀಯ ನಾಯಕರು ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
VIDEO | Panchur, Uttarakhand: Uttar Pradesh CM Yogi Adityanath lends a shoulder to his mother’s bier as her mortal remains are being taken to Haridwar for last rights.
#YogiAdityanath
(Full video available on PTI videos – https://t.co/d8jp61yd2p) https://t.co/30eYytGczr
— Press Trust of India (@PTI_News) November 21, 2026
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಯೋಗಿ ಆದಿತ್ಯನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಸಾಂತ್ವನ ತಿಳಿಸಿದ್ದರು. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ವೈಯಕ್ತಿಕ ನಷ್ಟದ ನಡುವೆಯೂ ಸಾರ್ವಜನಿಕ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಯೋಗಿ ಅವರ ಕರ್ತವ್ಯನಿಷ್ಠೆಯನ್ನು ಶ್ಲಾಘಿಸಿದ್ದರು.
ಸಿಎಂ ಯೋಗಿ ಆದಿತ್ಯನಾಥ್ ಅವರ ತಾಯಿ ಇಹಲೋಕ ತ್ಯಜಿಸಿರುವುದು ಅತ್ಯಂತ ದುಃಖಕರ ಸುದ್ದಿ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಇಂತಹ ಸಂಕಷ್ಟದ ಸಮಯದಲ್ಲೂ ಯೋಗಿ ಅವರು ಸಮಾಜ ಸೇವೆಯನ್ನು ಮುಂದುವರಿಸಿರುವುದು ಅವರ ಬದ್ಧತೆಗೆ ಸಾಕ್ಷಿ” ಎಂದು ಧಾಮಿ ಹೇಳಿದರು.
ಇದೇ ವೇಳೆ, ಉತ್ತರ ಪ್ರದೇಶದ ಮಹಿಳಾ ಮೋರ್ಚಾ ಪ್ರದೇಶ ಪ್ರವಾಸ ಸಭೆಯಲ್ಲಿ ಸಾವಿತ್ರಿ ದೇವಿ ಅವರ ಸ್ಮರಣಾರ್ಥ ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು. ಈ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಬ್ರಜೇಶ್ ಪಾಠಕ್, ಕೇಶವ್ ಪ್ರಸಾದ್ ಮೌರ್ಯ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಪಂಕಜ್ ಚೌಧರಿ ಉಪಸ್ಥಿತರಿದ್ದರು.
