ನವದೆಹಲಿ: ಪಾಕಿಸ್ತಾನದ ಸಚಿವರು ದೆಹಲಿಗೆ ಭೇಟಿ ನೀಡಿರುವ ಬೆನ್ನಲ್ಲೇ, ಸಿಂಧೂ ಜಲ ಒಪ್ಪಂದದ (Indus Water Treaty) ವಿಚಾರದಲ್ಲಿ ಭಾರತದ (India) ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ವಿದೇಶಾಂಗ ಸಚಿವಾಲಯ (Ministry of External Affairs) ಸ್ಪಷ್ಟಪಡಿಸಿದೆ.
ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವ ಮುಸಾದಿಕ್ ಮಸೂದ್ ಮಲಿಕ್ ಅವರು ದೆಹಲಿಯಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ನಾಗರಿಕತೆ ಸಂವಾದ ವೇದಿಕೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಂಧೂ ಜಲ ಒಪ್ಪಂದದ ಕುರಿತು ಭಾರತದ ನಿಲುವಿನಲ್ಲಿ ಬದಲಾವಣೆಯಾಗಿದೆಯೇ ಎಂಬ ಪ್ರಶ್ನೆ ಎದುರಾಗಿತ್ತು. ಇದನ್ನೂ ಓದಿ: ವಿದೇಶಿ ಪ್ರಜೆಯಾಗಿದ್ದರೂ ಮಾರುತಿ ಎಂಡಿ ಆಗಿದ್ದು ಹೇಗೆ – ಸೋನಿಯಾ ಗಾಂಧಿಗೆ ನಿಶಿಕಾಂತ್ ದುಬೆ ಪ್ರಶ್ನೆ
ಇದಕ್ಕೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಸಿಂಧೂ ಜಲ ಒಪ್ಪಂದದ ವಿಚಾರದಲ್ಲಿ ಭಾರತದ ನಿಲುವು ಈಗಾಗಲೇ ಸ್ಪಷ್ಟವಾಗಿದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗೋದಲ್ಲಿ ರಾಜ್ಯದ ಹಕ್ಕಿಪಿಕ್ಕಿ ಜನಾಂಗದ 95 ಮಂದಿ ಬಂಧನ
2025ರ ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಈ ದಾಳಿಯ ಬೆನ್ನಲ್ಲೇ ಏಪ್ರಿಲ್ 23ರಂದು ಭಾರತ 1960ರ ಸಿಂಧೂ ಜಲ ಒಪ್ಪಂದವನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟಿತ್ತು. ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನ ಬೆಂಬಲ ನೀಡುವುದನ್ನು ವಿಶ್ವಾಸಾರ್ಹವಾಗಿ ಮತ್ತು ಶಾಶ್ವತವಾಗಿ ನಿಲ್ಲಿಸುವವರೆಗೆ ಒಪ್ಪಂದ ಅಮಾನತಿನಲ್ಲಿರಲಿದೆ ಎಂದು ಭಾರತ ಘೋಷಿಸಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ವಾರ್ಡ್ ಒನ್ 3ನೇ ಹಂತದ ಅಭಿಯಾನಕ್ಕೆ ಚಾಲನೆ; ಫೋರಂ ಮಾಲ್ ಮುಂದೆ ಬುಲ್ಡೋಜರ್ ಸದ್ದು
ಇನ್ನು ನವೆಂಬರ್ 20ರಿಂದ 22ರವರೆಗೆ ದೆಹಲಿಯ ಐತಿಹಾಸಿಕ ಪುರಾಣ ಕಿಲಾದಲ್ಲಿ ನಡೆಯುತ್ತಿರುವ ಮೊದಲ ಎಸ್ಸಿಒ ನಾಗರಿಕತೆ ಸಂವಾದ ವೇದಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಎಸ್ಸಿಒ ಸದಸ್ಯ ರಾಷ್ಟ್ರಗಳೆಲ್ಲಕ್ಕೂ ಆಹ್ವಾನ ನೀಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೂ ಆಹ್ವಾನ ಕಳುಹಿಸಲಾಗಿದೆ ಎಂದು ಭಾರತ ತಿಳಿಸಿದೆ. ಇದನ್ನೂ ಓದಿ: ಹಾರಂಗಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ
ವೇದಿಕೆಯ ಹೊರಭಾಗದಲ್ಲಿ ಭಾರತ-ಪಾಕಿಸ್ತಾನ ಸಂಬಂಧಗಳ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಸಾದಿಕ್ ಮಲಿಕ್, ಈ ವೇದಿಕೆಯಲ್ಲಿ ನಡೆಯುವ ಎಲ್ಲಾ ಚರ್ಚೆಗಳು ಬಹುಪಕ್ಷೀಯ ಚೌಕಟ್ಟಿನಲ್ಲಿಯೇ ನಡೆಯುತ್ತಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಿನದ ಕೊನೇ ಓವರ್ನಲ್ಲಿ ಔಟಾದ ಗಿಲ್, 2 ರನ್ಗಳಿಂದ ಕೈತಪ್ಪಿದ ಶತಕ; ಭಾರತಕ್ಕೆ 118 ರನ್ಗಳ ಮುನ್ನಡೆ
