ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟವನ್ನು ಕೈಬಿಡುವಂತೆ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಮನವಿ ಮಾಡಿದ್ದಾರೆ.
ತಮ್ಮ ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡಿರುವ ಅವರು, ನಿಮ್ಮ ಬೇಡಿಕೆಗಳಿಗೆ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ದಯವಿಟ್ಟು ಹೋರಾಟವನ್ನು ಕೈಬಿಡುವಂತೆ ಆಶಾ ಕಾರ್ಯಕರ್ತೆಯರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಂತೆ ಪಂಜಾಬ್ನಲ್ಲೂ ಕಾಂಗ್ರೆಸ್ ಫ್ರೀ ಗ್ಯಾರಂಟಿ – 300 ಯೂನಿಟ್ ವಿದ್ಯುತ್ ಫ್ರೀ, ಮಹಿಳೆಯರಿಗೆ 1,000 ರೂ.
ಆಶಾ ಸಹೋದರಿಯರಲ್ಲಿ ಸರ್ಕಾರದ ಪರವಾಗಿ ನನ್ನ ಕಳಕಳಿಯ ಮನವಿ…
ನಿಮ್ಮ ಬೇಡಿಕೆಗಳಿಗಾಗಿ ನೀವು ನಡೆಸುತ್ತಿರುವ ಹೋರಾಟದ ನೋವು ಮತ್ತು ಸಂಕಷ್ಟ ನನಗೆ ಅರ್ಥವಾಗುತ್ತದೆ. ನಿಮ್ಮ ಕುಟುಂಬದವರನ್ನು ಬಿಟ್ಟು ಹಗಲು-ರಾತ್ರಿ ಎನ್ನದೆ ಹೋರಾಟ ಮಾಡುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ನೀವು ನನಗೆ ಕೇವಲ ಆಶಾ ಕಾರ್ಯಕರ್ತೆಯರಲ್ಲ, ನನ್ನ ಸಹೋದರಿಯರಿದ್ದಂತೆ.
ಅಂಗನವಾಡಿಗಳ ಸ್ಥಾಪನೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರಂಭ ಹಾಗೂ ಆಶಾ ಕಾರ್ಯಕರ್ತೆಯರ ಹುದ್ದೆಗಳ ಸೃಷ್ಟಿಯ ಮೂಲಕ ಮಹಿಳೆಯರು ಮತ್ತು ಆರೋಗ್ಯ ಕ್ಷೇತ್ರದ ಕಾರ್ಯಕರ್ತೆಯರಿಗೆ ಸೇವೆಯ ಅವಕಾಶ ಕಲ್ಪಿಸಿದ್ದು ನಮ್ಮ ಕಾಂಗ್ರೆಸ್ ಸರ್ಕಾರ.
ನಿಮ್ಮ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಸಮಗ್ರ ಮತ್ತು ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ. ಸಂಪುಟದ ಜೊತೆಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ನಿಮ್ಮೊಂದಿಗೆ ನಾವಿದ್ದೇವೆ. ಒಬ್ಬ ಅಣ್ಣನಾಗಿ ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ನನ್ನ ಮನವಿಗೆ ಸ್ಪಂದಿಸಿ, ಹೋರಾಟವನ್ನು ಕೈಬಿಡಿ. ನಿಮ್ಮ ಸೇವೆ, ಶ್ರಮ ಮತ್ತು ತ್ಯಾಗವನ್ನು ನಾವು ಗೌರವಿಸುತ್ತೇವೆ. ನಿಮ್ಮ ಬೇಡಿಕೆಗಳಿಗೆ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ.
— DK Shivakumar (@DKShivakumar) November 21, 2026
ಎಕ್ಸ್ನಲ್ಲಿ ಏನಿದೆ?
ಆಶಾ ಸಹೋದರಿಯರಲ್ಲಿ ಸರ್ಕಾರದ ಪರವಾಗಿ ನನ್ನ ಕಳಕಳಿಯ ಮನವಿ. ನಿಮ್ಮ ಬೇಡಿಕೆಗಳಿಗಾಗಿ ನೀವು ನಡೆಸುತ್ತಿರುವ ಹೋರಾಟದ ನೋವು ಮತ್ತು ಸಂಕಷ್ಟ ನನಗೆ ಅರ್ಥವಾಗುತ್ತದೆ. ನಿಮ್ಮ ಕುಟುಂಬದವರನ್ನು ಬಿಟ್ಟು ಹಗಲು-ರಾತ್ರಿ ಎನ್ನದೆ ಹೋರಾಟ ಮಾಡುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ನೀವು ನನಗೆ ಕೇವಲ ಆಶಾ ಕಾರ್ಯಕರ್ತೆಯರಲ್ಲ, ನನ್ನ ಸಹೋದರಿಯರಿದ್ದಂತೆ.
ಅಂಗನವಾಡಿಗಳ ಸ್ಥಾಪನೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರಂಭ ಹಾಗೂ ಆಶಾ ಕಾರ್ಯಕರ್ತೆಯರ ಹುದ್ದೆಗಳ ಸೃಷ್ಟಿಯ ಮೂಲಕ ಮಹಿಳೆಯರು ಮತ್ತು ಆರೋಗ್ಯ ಕ್ಷೇತ್ರದ ಕಾರ್ಯಕರ್ತೆಯರಿಗೆ ಸೇವೆಯ ಅವಕಾಶ ಕಲ್ಪಿಸಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಇದನ್ನೂ ಓದಿ: ಕೊಡಗು | ಬಾಲಕಿಯ ಶಿರಚ್ಛೇದನ ಮಾಡಿದ್ದ ಅಪರಾಧಿಗೆ ಮರಣದಂಡನೆ
ನಿಮ್ಮ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಸಮಗ್ರ ಮತ್ತು ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ. ಸಂಪುಟದ ಜೊತೆಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ನಿಮ್ಮೊಂದಿಗೆ ನಾವಿದ್ದೇವೆ. ಒಬ್ಬ ಅಣ್ಣನಾಗಿ ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ನನ್ನ ಮನವಿಗೆ ಸ್ಪಂದಿಸಿ, ಹೋರಾಟವನ್ನು ಕೈಬಿಡಿ. ನಿಮ್ಮ ಸೇವೆ, ಶ್ರಮ ಮತ್ತು ತ್ಯಾಗವನ್ನು ನಾವು ಗೌರವಿಸುತ್ತೇವೆ. ನಿಮ್ಮ ಬೇಡಿಕೆಗಳಿಗೆ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸರ್ಕಾರದಿಂದ ಟೈಟ್ ರೂಲ್ಸ್
