ಜೈಪುರ: ರಸ್ತೆಬದಿ ನಿಂತಿದ್ದ ಟ್ರಕ್ಗೆ (Truck) ಕ್ರೂಸರ್ (Cruiser) ಡಿಕ್ಕಿ ಹೊಡೆದ ಪರಿಣಾಮ ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ಭಕ್ತರು ಮೃತಪಟ್ಟಿರುವ ಘಟನೆ ರಾಜಸ್ಥಾನದ (Rajasthan) ಕೋಟಾ (Kota) ಜಿಲ್ಲೆಯಲ್ಲಿನಡೆದಿದೆ.
ಕೋಟಾ-ಉದಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಸುಮಾರು 2 ಗಂಟೆಗೆ ಈ ಅಪಘಾತ ಸಂಭವಿಸಿದೆ. ಶಂಭುಪುರ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್ಗೆ ವೇಗವಾಗಿ ಬಂದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನದಲ್ಲಿದ್ದ 15 ಮಂದಿಯ ಪೈಕಿ ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ ಆರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಪಂತ್ ಫೆಂಟಾಸ್ಟಿಕ್ ಶತಕ – 720 ರನ್ಗೆ ಡಿಕ್ಲೇರ್; ಸೇನಾ ಅಂಗಳದಲ್ಲಿ ಹೊಸ ದಾಖಲೆ ಬರೆದ ಭಾರತ
ಮಹಾರಾಷ್ಟ್ರ ಮೂಲದ ಒಂದೇ ಕುಟುಂಬದ 15 ಮಂದಿ ರಾಜಸ್ಥಾನದ ಖಾಟು ಶ್ಯಾಮ್ಜಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಚಾಲಕನಿಗೆ ನಿದ್ರೆ ಮಂಪರು ಆವರಿಸಿದ್ದರಿಂದ ನಿಯಂತ್ರಣ ತಪ್ಪಿ ಕ್ರೂಸರ್ ಟ್ರಕ್ಗೆ ಡಿಕ್ಕಿಯಾಗಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇದನ್ನೂ ಓದಿ: ರಂಗೇರಿದ ಹಿರಿಯೂರು ಉಪಚುನಾವಣಾ ಕಣ – ಟಿಕೆಟ್ಗಾಗಿ `ಕೈ’ ಮನೆಯಲ್ಲಿ ಪೈಪೋಟಿ
ಅಪಘಾತದಲ್ಲಿ ಮೃತಪಟ್ಟವರನ್ನು ಉಷಾ ಬಾಯಿ, ಸುಶೀಲಾ, ಕೈಲಾಶ್, ಸಾನ್ವಿ, ಸಜ್ಜನ್, ಅನಿತಾ, ಬಾಬುಲಾಲ್, ಜಾಹ್ನವಿ ಮತ್ತು ಮಾಧವಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಆರು ಮಂದಿಯನ್ನು ಅಂಬುಲೆನ್ಸ್ ಮೂಲಕ ನ್ಯೂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ತೇಜಸ್ವಿನಿ ಗೌತಮ್ ಸ್ಥಳಕ್ಕೆ ಧಾವಿಸಿದ್ದಾರೆ. ಇದನ್ನೂ ಓದಿ: ಗುಜರಾತ್ನಲ್ಲಿ ಭೀಕರ ಅಪಘಾತ – ಯೋಧನ ಕುಟುಂಬಕ್ಕೆ ಸೇರಿದ 7 ಮಂದಿ ದುರ್ಮರಣ!
ಪೊಲೀಸರು ಮತ್ತು ರಕ್ಷಣಾ ತಂಡಗಳು ವಾಹನದಲ್ಲಿ ಸಿಲುಕಿದ್ದವರನ್ನು ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿವೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ವೈದ್ಯಕೀಯ ತಂಡವನ್ನೂ ನಿಯೋಜಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಮತ್ತು ಆಡಳಿತಾಧಿಕಾರಿಗಳು ಅಪಘಾತ ಸ್ಥಳ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಇದನ್ನೂ ಓದಿ: ‘ಬಸವ ಮಂಟಪ’ ಲೇಖಕ ರವಿ ಹಂಜ್ ಹತ್ಯೆ ಮಾಡಿದ್ರೆ 5 ಲಕ್ಷ ರೂ. ಬಹುಮಾನ: ಪ್ರಕಾಶ್ ಮಹಾಜನ್ ವಿವಾದಾತ್ಮಕ ಹೇಳಿಕೆ
ಒಂಬತ್ತು ಮಂದಿ ಮೃತಪಟ್ಟಿರುವುದನ್ನು ದೃಢಪಡಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜೇಶ್ ಜೋಶಿ, ಘಟನೆಯನ್ನು ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿ ಎಂದು ಹೇಳಿದ್ದಾರೆ. ಖಾಟು ಶ್ಯಾಮ್ ದರ್ಶನ ಮುಗಿಸಿ ಮಹಾರಾಷ್ಟ್ರಕ್ಕೆ ವಾಪಸ್ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಒಂದೇ ಕುಟುಂಬದವರು. ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಿಸಿ ಅವರು ಚೇತರಿಸಿಕೊಳ್ಳುವಂತೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಜಿ ನಿಮ್ಮ ಸಲಹೆ ಪಾಲಿಸಿದ್ದೇವೆ ಅಂತ ಜನತೆ ಹೇಳುತ್ತಿದ್ದಾರೆ: ಚಿನ್ನದ ಬೆಲೆ ಕುಸಿತದ ಬಗ್ಗೆ ಮೋದಿ ಮಾತು
ಅಪಘಾತದಲ್ಲಿ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾಂಬೋಡಿಯಾದಿಂದ ಸಿಲಿಕಾನ್ ಸಿಟಿಗೆ ಸಫ್ಲೈ ಆಗ್ತಿದ್ದ 12 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್
