ಬೆಂಗಳೂರು: ಯುಜಿ ಆಯುಷ್ (UG AYUSH) ಕೋರ್ಸ್ಗಳ ಪ್ರವೇಶಕ್ಕೆ ಎದುರು ನೋಡುತ್ತಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್ ನ್ಯೂಸ್ ಕೊಟ್ಟಿದೆ. 3ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕೆಇಎ ಸೋಮವಾರ ಅಧಿಕೃತವಾಗಿ ಪ್ರಕಟಿಸಿದೆ.
ಈ ಸುತ್ತಿನಲ್ಲಿ ಒಟ್ಟು 2,471 ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆಯಾಗಿದೆ. ಸೀಟು ಸಿಕ್ಕಿರುವ ಅಭ್ಯರ್ಥಿಗಳು ಇದೇ ನವೆಂಬರ್ 25ರೊಳಗೆ ನಿಗದಿತ ಶುಲ್ಕವನ್ನು ಪಾವತಿಸಿ, ಸೀಟು ಖಾತರಿ ಚೀಟಿಯನ್ನು (Admission Order) ಡೌನ್ಲೋಡ್ ಮಾಡಿಕೊಳ್ಳಬೇಕು. ಇದಕ್ಕಾಗಿ ಕೆಇಎ ವೆಬ್ಸೈಟ್ನಲ್ಲಿ ಈಗಾಗಲೇ ಲಿಂಕ್ ಕೂಡ ಆಕ್ಟಿವ್ ಮಾಡಲಾಗಿದೆ.ಇದನ್ನೂ ಓದಿ: ಟೆಕ್ಕಿಯನ್ನು ಕೊಂದು ರಾತ್ರಿಯಿಡೀ ಶವದ ಬಳಿ ಕುಳಿತ ಲಿವ್ ಇನ್ ಪಾರ್ಟ್ನರ್
ಶುಲ್ಕ ಪಾವತಿಸಿ ಚೀಟಿ ಪಡೆದ ವಿದ್ಯಾರ್ಥಿಗಳು ನವೆಂಬರ್ 26ರೊಳಗೆ ತಮಗೆ ಹಂಚಿಕೆಯಾದ ಕಾಲೇಜುಗಳಿಗೆ ಹೋಗಿ ಅಡ್ಮಿಷನ್ ಮಾಡಿಕೊಳ್ಳುವುದು ಕಡ್ಡಾಯ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ತಿಳಿಸಿದ್ದಾರೆ.ಇದನ್ನೂ ಓದಿ: ಕಾವೇರಿ-ವೈಗೈ-ಗುಂಡಾರ್ ನದಿ ಜೋಡಣೆ ಯೋಜನೆ: ತಡೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಕರ್ನಾಟಕ
