– ದೆಹಲಿ ಪೊಲೀಸರಿಗೆ ನೋಟಿಸ್
ನವದೆಹಲಿ: 2020ರ ದೆಹಲಿ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲೀದ್ (Umar Khalid), ಶಾರ್ಜೀಲ್ ಇಮಾಮ್ಗೆ (Sharjeel Imam) ಮಧ್ಯಂತರ ಜಾಮೀನು ನೀಡಲು ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ.
ಇಂದು (ನ.25) ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ. ಇದೇ ವೇಳೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.ಇದನ್ನೂ ಓದಿ: ಕೋರ್ಟ್ಗೆ ಹಾಜರಾಗದೆ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜಿಂಕೆ ಜಿಮ್ಮಿ ಅರೆಸ್ಟ್!
ಇತ್ತೀಚೆಗೆ ದೆಹಲಿ ಹೈಕೋರ್ಟ್ (Dehli High Court) ಇಬ್ಬರಿಗೂ ಜಾಮೀನು ನೀಡಲು ನಿರಾಕರಿಸಿತ್ತು. ಹೀಗಾಗಿ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಬ್ಬರೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ವಿಚಾರಣೆ ವೇಳೆ ಉಮರ್ ಖಾಲೀದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದರು. ಇಮಾಮ್ ಪರ ಹಾಜರಾಗಿದ್ದ ಹಿರಿಯ ವಕೀಲ ಸಿದ್ಧಾರ್ಥ್ ದವೆ ಅವರು ಕೂಡ ದೀರ್ಘಕಾಲದ ಜೈಲುವಾಸದ ಬಗ್ಗೆ ಉಲ್ಲೇಖಿಸಿ ಪರಿಹಾರ ಕೋರಿದರು. ಆದರೆ, ವಕೀಲರು ಮಧ್ಯಂತರ ಜಾಮೀನಿಗಾಗಿ ಒತ್ತಾಯಿಸಿದಾಗ ಪೀಠವು ಇಂದು ಬೇಡ ಎಂದು ಹೇಳಿದೆ.ಇದನ್ನೂ ಓದಿ:ಪಾರ್ಟಿ ಬಳಿಕ ಸಹೋದ್ಯೋಗಿಗಳಿಂದಲೇ ಗ್ಯಾಂಗ್ ರೇಪ್ – ಇಬ್ಬರು ಮಹಿಳೆಯರು ಸೇರಿ ಮೂವರು ಅರೆಸ್ಟ್
ಮಧ್ಯಂತರ ಜಾಮೀನು ಮನವಿಯನ್ನು ಪರಿಗಣಿಸುವ ಮೊದಲು ದೆಹಲಿ ಪೊಲೀಸರ ಪ್ರತಿಕ್ರಿಯೆಯನ್ನು ಆಲಿಸುವುದಾಗಿ ನ್ಯಾಯಾಲಯ ತಿಳಿಸಿದೆ.
ಏನಿದು ಪ್ರಕರಣ?
ಪೌರತ್ವ (ತಿದ್ದುಪಡಿ) ಕಾಯ್ದೆ 2019 ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಪ್ರಕರಣದಲ್ಲಿ ಇಮಾಮ್ ಅವರನ್ನು 2020ರ ಆಗಸ್ಟ್ 25ರಂದು ಹಾಗೂ ಖಾಲಿದ್ ಅವರನ್ನು 2020ರ ಸೆಪ್ಟೆಂಬರ್ 13ರಂದು ಬಂಧಿಸಲಾಗಿತ್ತು. ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿಗೆ ಸಂಬಂಧಿಸಿದ ಯುಎಪಿಎ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 30ರಂದು ಇಬ್ಬರಿಗೂ ಜಾಮೀನು ನಿರಾಕರಿಸಿತ್ತು.ಇದನ್ನೂ ಓದಿ: ಪೋರ್ಟೊ ರಿಕೊದ ಜೆನ್ನಿಫರ್ ಬ್ಯಾರೆಟೊ 2026ರ ವಿಶ್ವ ಸುಂದರಿ ಕಿರೀಟ
