ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ (Udupi Krishna Mutt) ಕರ್ನಾಟಕ ವಿಧಾನ ಪರಿಷತ್ ಸದಸ್ಯೆ, ಹಿರಿಯ ನಟಿ ಉಮಾಶ್ರೀ (Umashree) ಭೇಟಿ ನೀಡಿ ದೇವರ ದರ್ಶನ ಪಡೆದರು.
ಪರ್ಯಾಯ ಶ್ರೀ ಶಿರೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯ ಸಂದರ್ಭದಲ್ಲಿ ಮಠಕ್ಕೆ ಆಗಮಿಸಿದ ಅವರು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಕಾಲುಗಳಿಗೆ 8 ಕೆಜಿ ತೂಕದ ಗೆಜ್ಜೆಗಳನ್ನು ಕಟ್ಟಿಕೊಂಡು ಕುಣಿದ ಶ್ರದ್ಧಾ ಕಪೂರ್; ಯಾಕೆ ಗೊತ್ತಾ?
ಈ ಸಂದರ್ಭದಲ್ಲಿ ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಅವರು ಉಮಾಶ್ರೀ ಅವರಿಗೆ ಕೃಷ್ಣಮಂತ್ರ ಲೇಖನ ಯಜ್ಞದ ಪುಸ್ತಕವನ್ನು ನೀಡಿ, ಯಜ್ಞದ ಮಹತ್ವ ಹಾಗೂ ಅದರ ಧಾರ್ಮಿಕ ಹಿನ್ನೆಲೆಯನ್ನು ವಿವರಿಸಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಪಂಜಾಬಿ ಗಾಯಕ ದಿಲ್ಜಿತ್ ದೋಸಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
