ಕಲಬುರಗಿ: 30 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪೊಲೀಸ್ ಕಾನ್ಸ್ಟೇಬಲ್ಗೆ ಕೋರ್ಟ್ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಭೀಮಾನಾಯಕ್ ಜೈಲು ಶಿಕ್ಷೆಗೆ ಒಳಗಾದ ಪೊಲೀಸ್ ಕಾನ್ಸ್ಟೇಬಲ್. ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಲಯದಿಂದ ಈ ಆದೇಶ ಹೊರಬಿದ್ದಿದೆ.
ನಿವೇಶನ ವಿವಾದ ಬಗೆಹರಿಸಲು 30 ಸಾವಿರ ಲಂಚ ಪಡೆಯುವಾಗ ಭೀಮಾನಾಯಕ್ ಲೋಕಾಯುಕ್ತ ಬಲಗೆ ಬಿದ್ದಿದ್ದರು. 2022 ರಲ್ಲಿ ಈ ಪ್ರಕರಣ ನಡೆದಿತ್ತು.
ಬ್ರಹ್ಮಪುರ ಠಾಣೆಯ ಕಾನ್ಸ್ಟೇಬಲ್ ಆಗಿದ್ದ ಭೀಮಾನಾಯಕ್ ವಿರುದ್ಧ ಪ್ರಕರಣ ದಾಖಲಿಸಿ ಲೋಕಾಯುಕ್ತ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ಬಳಿಕ ಕೋರ್ಟ್ ಐದು ವರ್ಷ ಜೈಲು ಶಿಕ್ಷೆ ಮತ್ತು 60 ಸಾವಿರ ದಂಡ ವಿಧಿಸಿದೆ.
