ಮುಂಬೈ: ನಿರ್ಜಲೀಕರಣದ (Dehydration) ಸಮಸ್ಯೆಯಿಂದ ಬಳಲುತ್ತಿದ್ದ ಎನ್ಸಿಪಿ ಮುಖ್ಯಸ್ಥ, ಹಿರಿಯ ರಾಜಕಾರಣಿ ಶರದ್ ಪವಾರ್ (Sharad Pawar) ಅವರನ್ನು ಗುರುವಾರ ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ (Breach Candy Hospital) ದಾಖಲಿಸಲಾಗಿದೆ ಎಂದು ಪುತ್ರಿ, ಸಂಸದೆ ಸುಪ್ರಿಯಾ ಸುಳೆ (Supriya Sule) ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸುಪ್ರಿಯಾ ಸುಳೆ, ತಂದೆಯನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ನಿರ್ಜಲೀಕರಣ ಸಮಸ್ಯೆ ಇರಬಹುದು ಎಂದು ಕಾಣುತ್ತಿದೆ. ಅವರು ತಮ್ಮ ಕೆಲಸದ ವೇಗವನ್ನು ಕಡಿಮೆ ಮಾಡಬೇಕು ಹಾಗೂ ಪ್ರಯಾಣವನ್ನು ತಗ್ಗಿಸಬೇಕು. ಆದರೆ ತಂದೆ ನಮ್ಮ ಮಾತು ಕೇಳುವುದಿಲ್ಲ. ಅವರಿಗೆ ತಮ್ಮ ಕೆಲಸದ ಮೇಲೆ ಅತಿಯಾದ ಪ್ರೀತಿ. ನಿಮ್ಮ ಕಾಳಜಿ ಮತ್ತು ಹಾರೈಕೆಗಳಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪುಷ್ಪ 2 ಹಿಂದಿಕ್ಕಿ ಗಳಿಕೆಯಲ್ಲಿ ಮತ್ತೊಂದು ದಾಖಲೆ ಬರೆದ ‘ರಾಮಾಯಣ’
ಎನ್ಸಿಪಿ ಕಚೇರಿಯಲ್ಲಿ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಶಶಿಕಾಂತ್ ಶಿಂಧೆ ಕರೆದಿದ್ದ ಸಭೆಯಲ್ಲಿ ಸುಪ್ರಿಯಾ ಸುಳೆ ಭಾಗವಹಿಸಿದ್ದರು. ಈ ವೇಳೆ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಭೆಯನ್ನು ಅರ್ಧದಲ್ಲೇ ಬಿಟ್ಟು ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನಿಗೆ 121 ಕೆಜಿ ಚಿನ್ನಾಭರಣ ಕಾಣಿಕೆ: ಚೆನ್ನೈ ಉದ್ಯಮಿಯಿಂದ ಐತಿಹಾಸಿಕ ದೇಣಿಗೆ!
85 ವರ್ಷದ ಶರದ್ ಪವಾರ್ ಇತ್ತೀಚೆಗಷ್ಟೇ ಎದೆ ಮತ್ತು ಉಸಿರಾಟದ ಸೋಂಕಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯದ ಬಗ್ಗೆ ಆತಂಕ ಮೂಡಿಸಿದೆ. ವಯಸ್ಸು 85 ದಾಟಿದ್ದರೂ ಶರದ್ ಪವಾರ್ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪಕ್ಷದ ಕೆಲಸಗಳು ಹಾಗೂ ನಿರಂತರ ಪ್ರಯಾಣದಿಂದಾಗಿ ಅವರ ಆರೋಗ್ಯದ ಬಗ್ಗೆ ಕುಟುಂಬಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ. ತಂದೆ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಂಡು ವಿಶ್ರಾಂತಿ ಪಡೆಯಬೇಕು ಎಂದು ಸುಪ್ರಿಯಾ ಸುಳೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯರಿಗೆ ದೆಹಲಿ ಮೆಟ್ರೊ, ಬಸ್ ನಿಲ್ದಾಣಗಳು ಅಸುರಕ್ಷಿತ – ಸಮೀಕ್ಷೆಯಲ್ಲಿ ಆತಂಕಕಾರಿ ಅಂಶ ಬಹಿರಂಗ
