ನವದೆಹಲಿ/ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನ (Renukaswamy Case) ಐವರು ಆರೋಪಿಗಳಿಗೆ ನೀಡಲಾಗಿದ್ದ ಜಾಮೀನು ರದ್ದು ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.
ಎ-3 ಪವನ್, ಎ5 ನಂದೀಶ್, ಎ9 ಧನರಾಜ್, ಎ10 ವಿನಯ್ ಹಾಗೂ ರಾಘವೇಂದ್ರಗೆ ನೀಡಲಾಗಿದ್ದ ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟ್ಗೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪ್ರರ್ದಿವಾಲ್ ಹಾಗೂ ವಿನೋದ್ ಚಂದ್ರನ್ ಪೀಠವು, ಒಂದೂವರೆ ವರ್ಷದ ಬಳಿಕ ಅರ್ಜಿ ಸಲ್ಲಿಸಿದೆ ಎಂದು ಅರ್ಜಿಯನ್ನು ವಜಾಗೊಳಿಸಿ, ಆದೇಶ ಹೊರಡಿಸಿದೆ. ಇದನ್ನೂ ಓದಿ: ದರ್ಶನ್ ಬೆನ್ನುನೋವು ಚಿಕಿತ್ಸೆಗೆ ಕೋರ್ಟ್ ಅಸ್ತು – ಇಂದೇ ಆಸ್ಪತ್ರೆಗೆ ಶಿಫ್ಟ್?
ಈ ಹಿಂದೆ ಐವರ ಜಾಮೀನು ರದ್ದು ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಹೀಗಾಗಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಾಸಿಕ್ಯೂಷನ್ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.
