ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ (DK Shivakumar) ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಬೆದರಿಕೆ (Bomb Threat) ಹಾಕಿ ಕರೆ ಮಾಡಿದ್ದ ಆರೋಪಿಯನ್ನ ಪೊಲೀಸ್ರು ಬಂಧಿಸಿದ್ದಾರೆ.
ಕಾರ್ತಿಕ್ ಬಂಧಿತ ಆರೋಪಿ. ಕಳೆದ 7ನೇ ತಾರೀಖಿನಂದು ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕನ ಮೂಲಕ ಬೆದರಿಕೆ ಹಾಕಿದ್ದ ಆರೋಪಿ ಕಾರ್ತಿಕ್ನನ್ನ ಸದಾಶಿವನಗರ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಪೋಷಕರಿಂದ ದೂರವಾಗಿ ಮನೆಯಿಂದ ಹೊರಗುಳಿದಿದ್ದ ಕಾರ್ತಿಕ್, ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದನು ಎನ್ನಲಾಗಿದೆ. ಈ ಹಿಂದೆಯೂ ಹಲವು ಬೆದರಿಕೆ ಕರೆ ಮಾಡಿರೋದು ಬೆಳಕಿಗೆ ಬಂದಿದೆ. ಆಟೋ ಚಾಲಕ ಭಗವಂತಪ್ಪ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಕಾರ್ತಿಕ್ನನ್ನ ಬಂಧಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

