ಬೆಂಗಳೂರು: ನಗರದ ಕಾಟನ್ ಪೇಟೆಯ ಮಸ್ತಾನ್ ದರ್ಗಾ ಬಳಿಯ (Cottonpete) ಲಾಡ್ಜ್ವೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯನ್ನು ಪ್ರಿಯಕರ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಇಬ್ಬರು ಕೂಡ ಕೇರಳದ ಆಡೂರು ಮೂಲದವರಾಗಿದ್ದು, ಗಂಗಾ ಕೊಲೆಯಾದ ವಿದ್ಯಾರ್ಥಿನಿ. ಪ್ರಿಯಕರನನ್ನು ಗೋಕುಲ್ ಕೃಷ್ಣ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸಿಎಂ ಡಿಕೆಶಿ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ – ಆರೋಪಿ ಕಾರ್ತಿಕ್ ಅರೆಸ್ಟ್
ಮೃತ ಗಂಗಾ ಹಾಗೂ ಆರೋಪಿ ಗೋಕುಲ್ ಇಬ್ಬರು ಕಳೆದ ನಾಲ್ಕು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕೊಲೆಗೆ ಮುನ್ನ ಆರೋಪಿ ಚಾಕು ಖರೀದಿ ಮಾಡಿದ್ದು, ಇಂದು (ನ.27) ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ ಇಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ಈ ವೇಳೆ ಜಗಳ ತಾರಕಕ್ಕೇರಿದ್ದು, ಆರೋಪಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸದ್ಯ ಸ್ಥಳಕ್ಕೆ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದು, ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಆಸ್ತಿಗಾಗಿ ಅತ್ತೆ, ಅಳಿಯನ ಕೊಲೆ – ಸಹೋದರಿಯರ ಮಕ್ಕಳಿಂದ ಕೃತ್ಯ
