ಚಿಕ್ಕಮಗಳೂರು: ಕಾಫಿ ಎಸ್ಟೇಟ್ ಮಾಲೀಕನೊಬ್ಬ ಬಂದೂಕು ಹಿಡಿದುಕೊಂಡು ಕಾರ್ಮಿಕರಿಗೆ ಬೆದರಿಸಿ ಹಲ್ಲೆ ಮಾಡಿದ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಬಸಗೂಡು ಗ್ರಾಮದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾಫಿ ಎಸ್ಟೇಟ್ ಮಾಲಿಕ ಭರತ್ ವಿರುದ್ಧ ಹೊರ ಜಿಲ್ಲೆಯ ವಲಸೆ ಕಾರ್ಮಿಕರು ಹಾಗೂ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಳ್ಳಲಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಕಾರ್ಮಿಕರಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಲಾಗಿದೆ. ಮಹಿಳೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಹೆಣ್ಮಕ್ಕಳ ಪಿಜಿಗೆ ನುಗ್ಗಿ ಅತ್ಯಾಚಾರ ಯತ್ನ, ಮೊಬೈಲ್ ಕಳ್ಳತನ – ಆರೋಪಿ ಕಾಲಿಗೆ ಗುಂಡೇಟು
ಬಂದೂಕು ತೋರಿಸಿ ಜೀವ ಬೆದರಿಕೆ ಹಾಕಿದ ಆರೋಪ ಸಹ ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಲ್ಲೆಯ ವಿಡಿಯೋ ವೈರಲ್ ಆಗಿದೆ. ಕಾರ್ಮಿಕರ ರಕ್ಷಣೆಗೆ ಜಿಲ್ಲಾಡಳಿತ ಮಧ್ಯ ಪ್ರವೇಶಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪೊಲೀಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.
ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಾಲೀಕನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜೈಲಲ್ಲಿದ್ದಾಗಲೇ ವೈದ್ಯೆಯೊಂದಿಗೆ ಲವ್ – ಪೆರೋಲ್ ಮೇಲೆ ಬಂದು ಮದುವೆ, ರೇಪ್ & ಮರ್ಡರ್ ಅಪರಾಧಿ ಕಳ್ಳತನ ಕೇಸಲ್ಲಿ ಮತ್ತೆ ಅಂದರ್
