– ಮತ್ತೊಬ್ಬನ ಸ್ಥಿತಿ ಗಂಭೀರ
ಮಂಡ್ಯ: ಇಲ್ಲಿನ (Mandya) ಇಂಡುವಾಳು ಗ್ರಾಮದ ಬಳಿಯ ಬೆಂಗಳೂರು – ಮೈಸೂರು ಹೈವೆಯಲ್ಲಿ ಟಿಪ್ಪರ್ಗೆ ಹಿಂಬದಿಯಿಂದ ಥಾರ್ (Mahindra Thar) ಡಿಕ್ಕಿಯಾಗಿ (Accident) ಕೇರಳ ಮೂಲದ ಯುವತಿ, ಯುವಕ ಸಾವನ್ನಪ್ಪಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ಕೇರಳ ಮೂಲದ ಲಿಫೈಲ್ ಹಾಗೂ ಮತ್ತೊಬ್ಬ ಯುವತಿ ಸಾವನ್ನಪ್ಪಿದ್ದಾಳೆ. ಬಾಸಿಲ್ ಎಂಬಾತನ ಸ್ಥಿತಿ ಗಂಭೀರವಾಗಿದೆ. ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಥಾರ್ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ, ಇಂಡುವಾಳು ಗ್ರಾಮದ ಬಳಿ ಜಲ್ಲಿ ತುಂಬಿದ್ದ ಟಿಪ್ಪರ್ಗೆ ಹಿಂಬದಿಯಿಂದ ಥಾರ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಂದೂಕು ಹಿಡಿದು ಕಾಫಿ ಎಸ್ಟೇಟ್ ಮಾಲೀಕನ ದರ್ಪ – ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್
ಗಂಭೀರವಾಗಿ ಗಾಯಗೊಂಡ ಯುವಕನಿಗೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ವಾಹನಗಳನ್ನು ತೆರವು ಮಾಡಿದ್ದಾರೆ. ಅಪಘಾತದಿಂದ ಈ ಮಾರ್ಗದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಕೊಲೆ – ಪ್ರಿಯಕರನಿಂದಲೇ ದುಷ್ಕೃತ್ಯ
