ನವದೆಹಲಿ: ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಶೇ.33 ರಷ್ಟು ಮಹಿಳಾ ಮೀಸಲಾತಿಗೆ (Women’s Quota Bill) ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೊವೊಂದನ್ನು ಪೋಸ್ಟ್ ಮಾಡಿರುವ ಮೋದಿ, ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡುವ ಮೂಲಕ ಎಲ್ಲಾ ಅಡೆತಡೆಗಳನ್ನು ತೆಗೆದುಹಾಕುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಇದನ್ನೂ ಓದಿ: ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ಘೋಷಣೆ
ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಗೆ ನಾವು ಬದ್ಧರಾಗಿದ್ದೇವೆ. ಈ ಹೋರಾಟ ದಶಕಗಳಿಂದ ನಡೆಯುತ್ತಿದೆ. ಅದಕ್ಕಾಗಿ ಹೋರಾಡಿದವರಲ್ಲಿ ನಾನೂ ಒಬ್ಬ. ನಾವು ನಮ್ಮ ನಾರಿ ಶಕ್ತಿಗೆ ಒಂದು ಭರವಸೆ ನೀಡಿದ್ದೇವೆ. ಅದನ್ನು ಪೂರೈಸಲು ನಾವು ಬದ್ಧರಾಗಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.
ಕೇಂದ್ರ ಸರ್ಕಾರವು ಕ್ಷೇತ್ರ ಪುನರ್ವಿಂಗಡಣೆ ಮಸೂದೆಯನ್ನು ಮತ್ತೆ ಜಾರಿಗೆ ತರುವ ಮುನ್ನ ಪ್ರಧಾನಿಯವರು ಈ ಭರವಸೆ ನೀಡಿದ್ದಾರೆ. 2023 ರಲ್ಲಿ ಅಂಗೀಕರಿಸಲಾದ ಮಹಿಳಾ ಕೋಟಾ ಕಾನೂನನ್ನು ಕೇಂದ್ರ ಸರ್ಕಾರವು ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ಸೇರಿಸಿದೆ. ಇದು 2029 ರ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆಯ ನಂತರ ರೂಪುಗೊಳ್ಳುವ ದೊಡ್ಡ ಸಂಸತ್ತಿನಲ್ಲಿ ಮಹಿಳೆಯರು 33% ಸ್ಥಾನಗಳನ್ನು ಪಡೆಯುವ ಮಸೂದೆಯಾಗಿದೆ. ಇದನ್ನೂ ಓದಿ: ಲೋಕಸಭೆಗೆ 850, ವಿಧಾನಸಭೆಗೆ 650 ಗರಿಷ್ಠ ಮಿತಿ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯಲ್ಲಿ ಏನಿದೆ?
