ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಜೈಲು ಸೇರಿರುವ ನಟ ದರ್ಶನ್ (Darshan), ಬೆನ್ನು ನೋವಿನ (Back Pain) ಚಿಕಿತ್ಸೆಯ ವಿಚಾರವಾಗಿ ಜೈಲಾಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್, ಸೂಕ್ತ ಚಿಕಿತ್ಸೆ ಕೋರಿ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಅಗತ್ಯ ಬಿದ್ದರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಂತೆ ಸೂಚನೆ ನೀಡಿದ್ದರು. ಆದರೆ ಕೋರ್ಟ್ ಆದೇಶ ತಂದರೂ ತಮಗೆ ತೊಂದರೆ ಕೊಡುತ್ತಿದ್ದೀರಿ, ನಮ್ಮ ನೋವು ನಮಗೆ ಮಾತ್ರ ಗೊತ್ತು ಅಂತ ವೈದ್ಯರ ವಿರುದ್ಧ ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಳ್ಳಾರಿ ಅಧಿದೇವತೆ ಕನಕದುರ್ಗಮ್ಮ ದೇವಿ ದೇವಸ್ಥಾನಕ್ಕೆ ವಿಜಯಲಕ್ಷ್ಮಿ ಭೇಟಿ – ದೇವಿಗೆ ಉಡಿ ತುಂಬಿ ಹರಕೆ ಸಲ್ಲಿಕೆ
ಇತ್ತ ಜೈಲಾಧಿಕಾರಿಗಳು ಮಾತ್ರ ಜೈಲಿನಲ್ಲೇ ಸೂಕ್ತ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಅಗತ್ಯವಿಲ್ಲ ಎಂಬ ನಿಲುವು ತಳೆದಿದ್ದಾರೆ ಎನ್ನಲಾಗಿದೆ. ಜೈಲಿನಲ್ಲೇ ಚಿಕಿತ್ಸೆ ನೀಡುವ ಅಧಿಕಾರಿಗಳ ನಿರ್ಧಾರದಿಂದ ಬೇಸತ್ತ ದರ್ಶನ್, ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. ಸದ್ಯ ಜೈಲಿನಲ್ಲಿ ದರ್ಶನ್ಗೆ ನಾಲ್ಕು ಬಾರಿ ಫಿಸಿಯೋಥೆರಪಿ ಮಾಡಲಾಗಿದೆ. ಟೆನ್ಸ್ ಮತ್ತು ಅಲ್ಟ್ರಾ ಬಳಸಿ ಬೆನ್ನು ನೋವಿಗೆ ಚಿಕಿತ್ಸೆ ಕೊಡಿಸಲಾಗಿದೆ. ಬೆನ್ನುನೋವಿಗೆ ಇಂಜೆಕ್ಷನ್, ಅಥವಾ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಕೊಡಿಸುವ ಅಗತ್ಯತೆ ಸದ್ಯಕ್ಕೆ ಇಲ್ಲ ಅಂತಾ ಅಧಿಕಾರಿಗಳು ಕೋರ್ಟ್ಗೆ ವರದಿ ನೀಡಿದ್ದರು. ಇದೆಲ್ಲದರಿಂದ ಬೇಸರಗೊಂಡ ನಟ ದರ್ಶನ್, ಅಧಿಕಾರಿಗಳ ಮೇಲೆ ಬೇಸರ ವ್ಯಕ್ತಪಡಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆನ್ನು ನೋವಿನ ಚಿಕಿತ್ಸೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಯಲಿದ್ದು, ನಾಳಿನ ವಿಚಾರಣೆಯಲ್ಲಿ ಕೋರ್ಟ್ ಯಾವ ನಿರ್ಧಾರ ಕೈಗೊಳ್ಳಲಿದೆ ಅನ್ನೋ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಕ್ಷೇತ್ರ ಪುನರ್ವಿಂಗಡಣೆ ಜಾರಿಗೆ ಬಂದರೆ ದೇಶದಲ್ಲಿ ಪ್ರಜಾಪ್ರಭುತ್ವ ಸತ್ತಂತೆ: ರಾಹುಲ್ ಗಾಂಧಿ
