ಧಾರವಾಡ: ಬೈಕ್ ಮತ್ತು ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‍ನಲ್ಲಿದ್ದ ಸವಾರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೃಷಿ ವಿವಿಯ ಸಮೀಪ ನಡೆದಿದೆ.
ಸಾವನ್ನಪ್ಪಿದ ದುರ್ದೈವಿ ಗುರುಪಾದಪ್ಪ ಗೊಡಚಿ (38) ಎಂದು ಗುರುತಿಸಲಾಗಿದ್ದು, ಮೃತ ಮಹಿಳೆ ಹೆಸರು ತಿಳಿದು ಬಂದಿಲ್ಲ. ನಗರದ ಹೊರವಲಯದ ಕೃಷಿ ವಿಶ್ವವಿದ್ಯಾಲಯದ ಬಳಿ ಈ ಘಟನೆ ನಡೆದಿದ್ದು, ಸಾವನ್ನಪ್ಪಿದ ವ್ಯಕ್ತಿ ಹಾಗೂ ಮಹಿಳೆ ಬೆಳಗಾವಿ ಜಿಲ್ಲೆಯ ರಾಮದುರ್ಗದವರು ಎಂದು ತಿಳಿದು ಬಂದಿದೆ.
ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೊಲೀಸರು ಬಸನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಸಾವನ್ನಪ್ಪಿದ ವ್ಯಕ್ತಿಗಳ ಶವಗಳನ್ನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.