ಹಾವೇರಿ: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಮಗುವೊಂದು ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ರಟ್ಟಿಹಳ್ಳಿಯ 2 ವರ್ಷದ ಮಗು ಕರುಣ್ ಉಪ್ಪೇನಮಾಳೇರ ಮೃತ ಮಗು. ಕಂದಮ್ಮಗೆ 15 ದಿನಗಳ ಹಿಂದೆ ನಾಯಿ ಕಚ್ಚಿತ್ತು. ಆದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಸರಿಯಾಗಿ ಚಿಕಿತ್ಸೆ ಸಿಕ್ಕಿಲ್ಲ. ಹೀಗಾಗಿ ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ.
ಇದ್ರಿಂದ ರೊಚ್ಚಿಗೆದ್ದ ಸಂಬಂಧಿಗಳು ಹಾಗೂ ಗ್ರಾಮಸ್ಥರು ಆಸ್ಪತ್ರೆಗೆ ನುಗ್ಗಿ ಗಲಾಟೆ ಮಾಡಿದ್ರು. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿದಿದ್ರೆ ಮಗು ಉಳೀತಿತ್ತು. ಈಗಾಲಾದ್ರೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎಂಬಿಬಿಎಸ್ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ ಇವತ್ತು ರಟ್ಟಿಹಳ್ಳಿ ಬಂದ್ ನಡೀತಿದೆ.