ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಸಹೋದರಿ ಇಂದು ನಿಧನರಾಗಿದ್ದಾರೆ.
90 ವರ್ಷ ವಯಸ್ಸಿನ ಚಿಕ್ಕಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
- Advertisement 2-
ಮೃತರ ಪಾರ್ಥೀವ ಶರೀರದ ಅಂತ್ಯಕ್ರಿಯೆ ದೇವೇಗೌಡನಹುಂಡಿಯಲ್ಲಿ ನೆರವೇರಲಿದೆ. ಅಂತ್ಯಕ್ರಿಯೆ ವೇಳೆ ಸಿಎಂ ಸಿದ್ದರಾಮಯ್ಯ ಉಪಸ್ಥಿತಿ ಇರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಇಂದಿನ ಅಧಿಕೃತ ಕಾರ್ಯಕ್ರಮಗಳು ರದ್ದಾಗಿವೆ.
- Advertisement 3-
- Advertisement 4-