ಕೋಲಾರ: ಚಲಿಸುತ್ತಿದ್ದ ಅಟೋ ಮೇಲೆ ಮರ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪ್ರಯಾಣಿಕರಿಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಸೀತನಾಯಕನಹಳ್ಳಿ ಬಳಿ ನಡೆದಿದೆ.
ಹರಪನಹಳ್ಳಿ ನಿವಾಸಿ 26 ವರ್ಷದ ಆಟೋ ಚಾಲಕ ರಘು ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳಿಬ್ಬರನ್ನು ಸಮೀಪದ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಟೋ ಸೀತನಾಯಕನ ಹಳ್ಳಿ ಮಾರ್ಗದಲ್ಲಿ ಬರುತ್ತಿದ್ದ ವೇಳೆ ಮರವೊಂದು ಕೆಳಗೆ ಬಿದ್ದಿದೆ. ಆಟೋದ ಮುಂಭಾಗಕ್ಕೆ ಮರ ಬಿದ್ದಿದ್ದರಿಂದ ಚಾಲಕನ ತಲೆಗೆ ಗಂಭೀರವಾಗಿ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆಟೋ ಹಿಂದೆ ಕೂತು ಪ್ರಯಾಣ ಮಾಡುತ್ತಿದ್ದವರಿಗೆ ಗಂಭೀರವಾಗಿ ಗಾಯವಾಗಿದೆ.
ಈ ಘಟನೆ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.