ರಾಮನಗರ: ಬಿಜೆಪಿಯಿಂದಾಗಿ ಚನ್ನಪಟ್ಟಣ ತಾಲ್ಲೂಕು ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಬಿಜೆಪಿಯ ಋಣ ಈ ತಾಲೂಕಿನ ಮೇಲಿದೆ ಎಂದು ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಚನ್ನಪಟ್ಟಣದಲ್ಲಿ ಆಯೋಜನೆಗೊಂಡಿದ್ದ ನಡೆದ ಸ್ವಾಭಿಮಾನಿ ಪ್ರಗತಿಪರ ಚಿಂತನಾ ಸಭೆಯಲ್ಲಿ ಮಾತನಾಡಿದ ಅವರು, ನಾನು ಈ ಕ್ಷೇತ್ರದಲ್ಲಿ 7 ಭಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಅದರಲ್ಲಿ ಬಿಜೆಪಿಯಿಂದ ಮೂರು ಭಾರಿ ಸ್ಪರ್ಧೆ ಮಾಡಿದ್ದೇನೆ. ಬಿಜೆಪಿ ಪಕ್ಷದಿಂದ ಚನ್ನಪಟ್ಟಣ ತಾಲ್ಲೂಕು ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದು ಹೇಳುವ ಮೂಲಕ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಯೋಗೇಶ್ವರ್ ಸುಳಿವು ಬಿಟ್ಟುಕೊಟ್ಟರು.
ನಾನು ಹಣ ಕೊಟ್ಟು ಕಾರ್ಯಕರ್ತರನ್ನ ಸಭೆಗೆ ಕರೆಸಿಲ್ಲ, ಸ್ವಾಭಿಮಾನಿ ಕಾರ್ಯಕರ್ತರೇ ಈ ಸಭೆಯನ್ನ ಆಯೋಜಿಸಿದ್ದಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ನನ್ನ ರಾಜಕೀಯ ನಡೆಯ ಬಗ್ಗೆ ಅಂತಿಮ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಸಿಪಿ ಯೋಗೇಶ್ವರ್ ಹೇಳಿದರು.
ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ ಡಿಕೆಶಿ, ಯೋಗೇಶ್ವರ್
ನನ್ನ ರಾಜಕೀಯ ನಡೆ ವಿಚಾರವನ್ನು ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಚರ್ಚೆ ಮಾಡಬೇಕಿದೆ. ನನ್ನ ಮೇಲೆ ಪಕ್ಷ ಬದಲಾವಣೆ ಮಾಡುವ ಆರೋಪವಿದೆ. ಆದರೆ ಇದು ನನ್ನ ಕೊನೆಯ ರಾಜಕೀಯ ತೀರ್ಮಾನ. ಇನ್ನು ಮುಂದೆ ಯಾವುದೇ ರೀತಿಯ ಬದಲಾವಣೆಯಾಗುವುದಿಲ್ಲ ಎಂದರು.
ಈಗಾಗಲೇ ಬಿಜೆಪಿಯ ಎಲ್ಲಾ ಪ್ರಮುಖ ನಾಯಕರ ಜೊತೆ ಚರ್ಚೆ ಮಾಡಿದ್ದೇನೆ. ಆದರೆ ಇನ್ನೂ ಮಾತುಕತೆ ಪೂರ್ಣವಾಗಿಲ್ಲ. ನಾನು ಬಿಜೆಪಿ ನಾಯಕರ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ. ಬಿಜೆಪಿ ನಾಯಕರೇ ನನಗೆ ಹೆಚ್ಚಿನ ಜವಾಬ್ದಾರಿಯನ್ನು ಕೊಡುತ್ತೇವೆಂದು ಹೇಳಿದ್ದಾರೆಂದು ತಿಳಿಸಿದರು.
ಇದನ್ನೂ ಓದಿ: ಸಿ.ಪಿ.ಯೋಗೇಶ್ವರ್ ರಾಜೀನಾಮೆಗೆ ಡಿಕೆಶಿ ಪ್ರತಿಕ್ರಿಯೆ
ಇದನ್ನೂ ಓದಿ: ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಶಾಸಕ ಸಿ.ಪಿ.ಯೋಗೇಶ್ವರ್-ಡಿಕೆಶಿ ವಿರುದ್ಧ ತೀವ್ರ ವಾಗ್ದಾಳಿ