ಬೆಂಗಳೂರು: ನಗರದ ಚರಂಡಿ ಅವ್ಯವಸ್ಥೆ ಬಗ್ಗೆ ದೆಹಲಿಯ ರಾಷ್ಟೀಯ ಹಸಿರು ನ್ಯಾಯಾಧಿಕರಣ ಕಳವಳ ವ್ಯಕ್ತಪಡಿಸಿದ್ದು, ಬೆಂಗಳೂರಿನ ಚರಂಡಿ ಅವ್ಯವಸ್ಥೆಗೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದೆ.
ಬೆಳ್ಳಂದೂರು ಕೆರೆ ಮಾಲಿನ್ಯ ಅರ್ಜಿ ವಿಚಾರಣೆ ವೇಳೆ ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಒಟ್ಟು 16 ಮಂದಿ ಸಾವನ್ನಪ್ಪಿದ್ದರು, ಇದಕ್ಕೆ ಅಸಮರ್ಪಕ ಚರಂಡಿ ವ್ಯವಸ್ಥೆ ಕಾರಣ ಅಂತಾ ಆರೋಪಿಸಿ ಅರ್ಜಿದಾರ ಕುಪೇಂದ್ರ ರೆಡ್ಡಿ ಪರ ವಕೀಲ ಫೋಟೊ ಸಹಿತ ದಾಖಲೆಗಳನ್ನು ನ್ಯಾಯಾಧಿಕರಣ ಸಲ್ಲಿಸಿದ್ದರು.
ನ್ಯಾ. ಸ್ವತಂತ್ರಕುಮಾರ್ ನೇತೃತ್ವದ ತ್ರಿಸದಸ್ಯ ಪೀಠ ಮಳೆಯಿಂದ 16 ಮಂದಿ ಸಾವನ್ನಪ್ಪಿರುವ ಬಗ್ಗೆ ಆತಂಕ ವ್ಯಕ್ತಪಡಿಸಿತು. ಮಳೆಗೆ ಜನರು ಚರಂಡಿಯಲ್ಲಿ ಕೊಚ್ಚಿ ಹೋಗಿ ಸಾಯುತ್ತಾರೆ ಅಂದರೆ ಬೆಂಗಳೂರಿನ ಚರಂಡಿ ವ್ಯವಸ್ಥೆಗೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿತು.
ಇದೇ ಸಂದರ್ಭದಲ್ಲಿ ನಗರದ ಬೆಳಂದೂರು ಕೆರೆ ವ್ಯಾಪ್ತಿಯ ಅಪಾರ್ಟ್ ಮೆಂಟ್ ನಿವಾಸಿಗಳ ಒಕ್ಕೂಟ ಘನ ತಾಜ್ಯ ಘಟಕ ಅವಳವಡಿಕೆ ಸಮಯ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಎನ್‍ಜಿಟಿ ಮುಂದೂಡಿತು.