Exclusive: ಬಿಜೆಪಿ ಪರಿವರ್ತನಾ ಯಾತ್ರೆಗೆ ಬೆದರಿದ್ರಾ ಸಿಎಂ ಸಿದ್ದರಾಮಯ್ಯ?

Public TV
1 Min Read
CM BSY 1

ಬೆಂಗಳೂರು: ಮುಂಬರುವ ಚುನಾವಣೆಗೆ ಬಿಜೆಪಿಯಿಂದ ಹಿಂದುತ್ವ ಅಜೆಂಡಾ ಘೋಷಣೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ವೇಳೆ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಎಸ್‍ಪಿ, ಪೊಲೀಸ್ ಆಯುಕ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಈ ಸಭೆಯಲ್ಲಿ ಸಿಎಂ ಬರೀ ಪರಿವರ್ತನಾ ರ‍್ಯಾಲಿಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಪರಿವರ್ತನಾ ರ‍್ಯಾಲಿ ಯಾವ ರೀತಿ ನಡೆಯುತ್ತೆ? ಎಲ್ಲೆಲ್ಲಿ ಏನೇನಾಗುತ್ತೆ ಎಂಬುದರ ಬಗ್ಗೆ ಇಂಚಿಚು ಮಾಹಿತಿ ನೀಡಬೇಕು. ಯಾತ್ರೆ ವೇಳೆ ಎಲ್ಲಿಯಾದರೂ ಉದ್ಧಟತನ ಮಾಡಿದ್ರೆ ಮುಲಾಜಿಲ್ಲದೆ ಅವರ ವಿರುದ್ಧ ಕೇಸ್ ಗಳನ್ನು ಹಾಕಬೇಕು. ಪರಿವರ್ತನಾ ಯಾತ್ರೆಯ ಅಲೆ ಹೇಗಿದೆ? ಅದಕ್ಕೆ ಎಷ್ಟು ಜನ ಸೇರಿದ್ರು, ಎಂಬುದರ ಬಗ್ಗೆ ಸಂಪೂರ್ಣ ವರದಿ ನೀಡಬೇಕು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.Public Tv

 

ಸಾಧ್ಯವಾದರೆ ಪರಿವರ್ತನಾ ಯಾತ್ರೆಗೆ ಅಡ್ಡಗಾಲು ಹಾಕಿ, ಭಯಪಡುವ ಅಗತ್ಯ ಇಲ್ಲ. ಸೂಕ್ಷ ಪ್ರದೇಶಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡುವವರು ಯಾರಾದರೂ ಬಂದರೆ ಅವರನ್ನು ತಡೆಯಿರಿ. ಸೂಕ್ಷ್ಮ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ತಿಳಿದರೆ ತಕ್ಷಣ ನಿಷೇಧಾಜ್ಞೆ ಜಾರಿ ಮಾಡಿ. ನಿಷೇಧಾಜ್ಞೆ ಜಾರಿ ಮಾಡಿದ ಪ್ರದೇಶದಲ್ಲಿ ಯಾತ್ರೆ ಆಗದಂತೆ ನೋಡಿಕೊಳಬೇಕು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

ಈ ಯಾತ್ರೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು. ಜೊತೆಗೆ ಸಾರ್ವಜನಿಕರಿಗೂ ಯಾವುದೇ ರೀತಿಯ ತೊಂದರೆ ಆಗಬಾರದು. ಟಿಪ್ಪು ಜಯಂತಿ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಕಾಪಾಡಬೇಕು. ಹಾಗೇನಾದರೂ ಅಹಿತಕರ ಘಟನೆ ನಡೆದರೆ ತಲೆದಂಡ ಗ್ಯಾರೆಂಟಿ ಎಂದು ಎಚ್ಚರಿಸಿದ್ದಾರೆ.

ಪ್ರಚೋದನಕಾರಿ ಭಾಷಣ ಮಾಡುವ ನಾಯಕರ ಪಟ್ಟಿ ತಯಾರಿಸಿ, ಭದ್ರತೆ ನೋಡಿಕೊಳ್ಳಿ. ಅದನ್ನು ಬಿಟ್ಟು ಚಮಚಗಿರಿ ಮಾಡೋಕೆ ಹೋದ್ರೆ ನಿಮಗೆ ಬಹುಮಾನ ಸಿಕ್ಕುತ್ತೆ ನೋಡಿ ಎಂದು ಎಚ್ಚರಿಸಿದ್ದಾರೆ ಎನ್ನಲಾಗಿದೆ.

 

 

vlcsnap 2017 11 02 16h20m09s680 1

JDS BJP 8 1

JDS BJP 7 1

BSY RALLY 1

BSY CAR NUMBEM 6 1

RMG CP YOGESWAR 9 2

RMG CP YOGESWAR 8 2

RMG CP YOGESWAR 4 1

RMG CP YOGESWAR 2 2

DNj9XeaUMAAc8a3 2

RYALY 2 1

bjp rally 34

bjp rally 35

bjp rally 36

bjp rally 33

bjp rally 32

bjp rally 31

bjp rally 30

bjp rally 29

bjp rally 24

bjp rally 23

bjp rally 22

bjp rally 18

bjp rally 19

bjp rally 20

bjp rally 21

bjp rally 17

bjp rally 12

bjp rally 13

bjp rally 14

bjp rally 15

bjp rally 16

bjp rally 11

bjp rally 10

Share This Article
Leave a Comment

Leave a Reply

Your email address will not be published. Required fields are marked *