ಕಾರವಾರ: ಆದಾಯ ತೆರಿಗೆ ದಾಳಿಗೆ ಒಳಗಾಗಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಶೀಘ್ರದಲ್ಲಿಯೇ ರಾಜೀನಾಮೆ ನೀಡುವ ಸ್ಥಿತಿ ಬರಲಿದೆ ಎಂದು ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವುದು ಖಚಿತವಾಗಿದೆ ಎಂದು ಹೇಳಿದರು.
ಐಟಿ ದಾಳಿಯಿಂದ ಅಕ್ರಮ ಆಸ್ತಿ ಗಳಿಕೆಯ ಬಗ್ಗೆ ಮಾಹಿತಿ ಸಿಕ್ಕ ನಂತರವೇ ಇಡೀ ಕುಟುಂಬವನ್ನ ವಿಚಾರಣೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಿದ್ದಾರೆ. ಇದಾದ ನಂತರ ಅನಿವಾರ್ಯವಾಗಿ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?
ಇದನ್ನೂ ಓದಿ: ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್
ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?
ಇದನ್ನೂ ಓದಿ: ಡಿಕೆಶಿ ಮೇಲೆ ಐಟಿ ದಾಳಿಗೆ ಪ್ಲ್ಯಾನ್ ನಡೆದಿದ್ದು ಹೀಗೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮರಳು ಮಾಫಿಯಾ, ಕಲ್ಲು ಗಣಿಗಾರಿಕೆ ಹಾವಳಿ ತಡೆಯಲು ರಾಜ್ಯ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್ ಆಡಳಿತ ಹೇಗಿದೆ ಅಂದರೆ ಕುಮಟದ ಸರ್ಕಾರಿ ಆಸ್ಪತ್ರೆಯ ಸ್ಥಿತಿಯೇ ಸಾಕ್ಷಿ. ಚಿಕಿತ್ಸೆಗೆ ಹುಬ್ಬಳ್ಳಿ ಅಥವಾ ಮಂಗಳೂರಿಗೆ ಹೋಗುವಂತಾಗಿದೆ.#ParivartanaYatre #Kumta
— B.S.Yediyurappa (@BSYBJP) November 14, 2017

ಯಕ್ಷಗಾನ ಕಲಾವಿದ ಇದೇ ಕ್ಷೇತ್ರದವರಾದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ಶ್ರದ್ದಾಂಜಲಿ ಅರ್ಪಿಸುತ್ತೇನೆ. ಅವರು ಯಕ್ಷಗಾನಕಲೆಗೆ ಸಲ್ಲಿಸಿದ ಸೇವೆ ಚಿರಸ್ಮರಣೀಯ. ಯಕ್ಷಗಾನ ಕಲೆಗೆ ಉತ್ತರ ಕನ್ನಡ ಜಿಲ್ಲೆಯ ಕೊಡುಗೆ ಅಪಾರ.#ParivartanaYatre #Kumta
— B.S.Yediyurappa (@BSYBJP) November 14, 2017