ಮಂಡ್ಯ: ನಾನು ಚುನಾವಣೆಗೆ ನಿಲ್ಲಬೇಕು ಅಂತಾ ವರುಣಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿಲ್ಲ. ಮುಖ್ಯಮಂತ್ರಿಗಳು ಬ್ಯೂಸಿ ಆಗಿರುವದರಿಂದ ಅವರ ಪರವಾಗಿ ವರುಣಾ ಕ್ಷೇತ್ರದ ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದೇನೆ ಎಂದು ಸಿಎಂ ಪುತ್ರ ಡಾ. ಯತೀಂದ್ರ ತಿಳಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸುವ ವಿಚಾರ ಇನ್ನೂ ತೀರ್ಮಾನವಾಗಿಲ್ಲ. ಪಕ್ಷದ ಹೈಕಮಾಂಡ್ ಟಿಕೆಟ್ ನೀಡುವ ಸಂದರ್ಭದಲ್ಲಿ ಚುನಾವಣೆಯ ಬಗ್ಗೆ ನಾನು ಖಚಿತ ನಿರ್ಧಾರವನ್ನು ತಿಳಿಸುತ್ತೇನೆ. ಚುನಾವಣೆಗೆ ನಿಲ್ಲುವಂತೆ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ರಾಜಕಾರಣಿಗಳ ಮಕ್ಕಳು ರಾಜಕೀಯಕ್ಕೆ ಬರುವುದಲ್ಲಿ ತಪ್ಪೇನಿಲ್ಲ ಅಂತಾ ಅಂದ್ರು.
ಇದನ್ನೂ ಓದಿ: ಸಿಎಂ ಪುತ್ರ ಯತೀಂದ್ರ ವಿರುದ್ಧ ಶಂಕರ್ ಬಿದರಿ ಸ್ಪರ್ಧೆ?
ಒಂದು ವೇಳೆ ರಾಜಕೀಯಕ್ಕೆ ಬಂದರೂ ಅದು ಕುಟುಂಬ ರಾಜಕಾರಣವಾಗಲ್ಲ. ಪ್ರಜಾಪ್ರಭುತ್ವದ ಜನರು ಒಪ್ಪಿಕೊಂಡರೆ ಮಾತ್ರ ನಾನು ಜನ ನಾಯಕ ಆಗಬಲ್ಲೆ ಎಂದು ಸ್ಪಷ್ಟಪಡಿಸಿದರು. ಸಿಎಂ ಸಿದ್ದರಾಮಯ್ಯನವರು ತಮ್ಮ ಪುತ್ರ ಯತೀಂದ್ರರಿಗಾಗಿ ವರುಣಾ ಕ್ಷೇತ್ರವನ್ನು ತ್ಯಜಿಸಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಬಲವಾಗಿ ಕೇಳಿ ಬರುತ್ತಿದೆ.
ಇದನ್ನೂ ಓದಿ: ಕ್ಷೇತ್ರ ಬದಲಾವಣೆಯ ಗುಟ್ಟು ಬಿಟ್ಟುಕೊಟ್ಟ ಸಿದ್ದರಾಮಯ್ಯ ಲೆಕ್ಕಾಚಾರ ಹೇಗಿದೆ?