ವಿಜಯಪುರ: ಅಪ್ರಾಪ್ತ ಬಾಲಕಿ ದಾನಮ್ಮ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ವಿಜಯಪುರ ಎಸ್‍ಪಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಜೊತೆಗೆ ಚರ್ಚಿಸಿ ಸಿಐಡಿ ತನಿಖೆಗೆ ಆದೇಶ ಮಾಡಲಾಗಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ವರದಿ ಬಂದಿಲ್ಲ. ವರದಿ ಬಂದ್ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ರು.
ಈ ಪ್ರಕರಣದಲ್ಲಿ ಬಿಜೆಪಿಯವರು ಸಾವಿನ ಮನೆಯಲ್ಲಿ ರಾಜಕೀಯ ಬೆಳೆ ಬೇಯಿಸಿಕೊಳ್ತಾರೆ ಎಂದು ವಾಗ್ದಾಳಿ ಮಾಡಿದರು.
ಬುಧವಾರದಂದು ಸಚಿವ ಎಂ.ಬಿ.ಪಾಟೀಲ್ ಸ್ಥಳಕ್ಕೆ ತೆರಳಿ ಅಪ್ರಾಪ್ತೆಯ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ್ದರು.ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಿದ ಎಬಿವಿಪಿ ಕಾರ್ಯಕರ್ತರು, ಶೀಘ್ರವೇ ಕಾಮುಕರನ್ನ ಬಂಧಿಸಬೇಕೆಂದು ಆಗ್ರಹಿಸಿದ್ರು. ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಕಡೆಗೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಮೂವರು ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಿದ್ರು.