ಹೈದರಾಬಾದ್: ಬ್ಯಾಡ್ಮಿಂಟನ್ ತಾರೆ, ಪದ್ಮಶ್ರೀ ಪುರಸ್ಕೃತೆ, ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಖ್ಯಾತ ಟಿವಿ ಶೋವೊಂದರಲ್ಲಿ ಗೆದ್ದ ಸುಮಾರು 25 ಲಕ್ಷ ರೂಪಾಯಿ ಹಣವನ್ನು ಕ್ಯಾನ್ಸರ್ ಆಸ್ಪತ್ರೆಯೊಂದಕ್ಕೆ ಕೊಡುಗೆಯಾಗಿ ನೀಡಿದ್ದಾರೆ.
ಬಾಲಿವುಡ್ ಹಿರಿಯ ನಟ, ಬಿಗ್ ಬಿ, ಅಮಿತಾಬ್ ಬಚ್ಚನ್ ನಿರೂಪಣೆಯ `ಕೌನ್ ಬನೇಗಾ ಕರೋಡ್‍ಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಂಧು, 25 ಲಕ್ಷ ರೂ. ಹಣವನ್ನು ಗೆದ್ದಿದ್ದರು. ಅದನ್ನು ಬಸವತಾರಕಂ ಇಂಡೋ-ಅಮೆರಿಕನ್ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಗೆ ಸಿಂಧು ದಾನ ಮಾಡಿದ್ದಾರೆ.
ಆಸ್ಪತ್ರೆಯ ಮುಖ್ಯಸ್ಥ, ಟಾಲಿವುಡ್‍ನ ಖ್ಯಾತ ನಟ ಎನ್.ಬಾಲಕೃಷ್ಣ ಅವರಿಗೆ ಸಿಂಧು 25 ಲಕ್ಷ ರೂ. ಚೆಕ್ ನೀಡಿದ್ದಾರೆ. ಕ್ಯಾನ್ಸರ್ ಆಸ್ಪತ್ರೆಗೆ ಹಣ ದಾನ ಮಾಡಿರುವ ಸಿಂಧು ಅವರನ್ನು ಬಾಲಕೃಷ್ಣ ಅಭಿನಂದಿಸಿ ಸಿಂಧು ಮಾಡಿದ ಕಾರ್ಯ ಇತರರಿಗೆ ಮಾದರಿಯಾಗುತ್ತದೆ ಎಂದು ಹೇಳಿದ್ದಾರೆ.