ಹಾವೇರಿ: ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾದ ಘಟನೆ ಹಾವೇರಿ ನಗರದ ನಾಗೇನಮಟ್ಟಿ ಬಡಾವಣೆ ಬಳಿ ನಡೆದಿದೆ.
ಮೃತ ವ್ಯಕ್ತಿಯ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ವ್ಯಕ್ತಿ ಅಂಗವಿಕಲನಾಗಿದ್ದು, ಸುಮಾರು ಮೂವತ್ತು ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ.
ಚಲಿಸುವ ರೈಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಮೃತ ದೇಹದ ಪತ್ತೆಯಾಗಿರುವ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಹಾವೇರಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.